ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

22chn5
Published on

ಚಾಮರಾಜನಗರ: ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅರಿವು ಅಗತ್ಯವಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಹೇಳಿದರು.

ತಾಲೂಕಿನ ಕೊತ್ತಲವಾಡಿ ಗ್ರಾಮದ ಗಂಗಾಧರೇಶ್ವರ ್ರೌಡಶಾಲೆಯ ಆವರಣದಲ್ಲಿ ಜೆ.ಎಸ್.ಎಸ್.ಮಹಿಳಾ ಪದವಿ ಪೂರ್ವ ಕಾಲೇಜು ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಬುಧವಾರ ಭಾಗವಹಿಸಿ ಕಾನೂನು ಸಲಹೆ ಕುರಿತು ಉಪನ್ಯಾಸ ನೀಡಿದರು.

ಜಿಲ್ಲೆಯಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗಿ ನಡೆಯುತ್ತಿದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಓದುವ ಕಡೆ ಗಮನಹರಿಸಬೇಕು. ಓದುವ ವಯಸ್ಸಿನಲ್ಲಿ ಅನಗತ್ಯ ವಿಚಾರಗಳಿಗೆ ಕಿವಿಗೊಡಬಾರದು. ಸಮಾಜದ ಪ್ರತಿಯೊಬ್ಬರೂ ನಮ್ಮ ಸಂವಿಧಾನದ ಕಾನೂನುಗಳನ್ನು ಗೌರವಿಸಬೇಕು. ಎನ್.ಎಸ್.ಎಸ್ ಶಿಬಿರಗಳು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತದೆ. ಸಾರ್ವಜನಿರೊಂದಿಗೆ ಸ್ನೇಹ ಮನೋಭಾವದಿಂದ ಬೆಳೆಯುವುದನ್ನು ಕಲಿಸುತ್ತದೆ. ಗ್ರಾಮಗಳಲ್ಲಿ ಸ್ವಚ್ಚತೆ, ಪರಿಸರ ಅಭಿವೃದ್ದಿಗೆ ವಿದ್ಯಾರ್ಥಿಗಳ ಶ್ರಮವು ಮುಖ್ಯವಾಗಿದೆ ಎಂದು ತಿಳಿಸಿದರು.

ವಕೀಲ ಮಲ್ಲು ಮಾತನಾಡಿ , ವಿದ್ಯಾರ್ಥಿಗಳು ವಾಹನ ಚಲಾಯಿಸಲು ಪರವಾನಿಗೆ ಪಡೆದಿರಬೇಕು. ಇಲ್ಲವೆಂದರೆ ಅಪರಾಧವಾಗುತ್ತದೆ. ವಾಹನಗಳಿಗೆ ವಿಮೆ ಮುಖ್ಯವಾಗಿರುತ್ತದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಬಾಲ್ಯ ವಿವಾಹ ಮತ್ತು ಪೋಕ್ಸ್ ಕಾಯಿದೆ ಬಹಳ ಕಠಿಣವಾಗಿದೆ. 18ವರ್ಷ ತುಂಬುವ ಮುಂಚೆಯೇ ಹೆಣ್ಣು ಮಕ್ಕಳಿಗೆ ಮದುವೆ ಮಾಡಿದರೆ ಕಾನೂನಿನಲ್ಲಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ.ವಿರೂಪಾಕ್ಷ ಸ್ವಾಮಿ, ಶಿಬಿರಾಧಿಕಾರಿ ಗಿರೀಶ್ ಹರವೆ, ಉಪನ್ಯಾಸಕ ಉಮಾಪತಿ, ವೀರೇಶ್, ರಮ್ಯಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net