ಗ್ರಂಥಾಲಯಗಳಿಂದ ಜ್ಞಾನಭಂಢಾರ ವೃದ್ಧಿ

22chn13
Published on

ಚಾಮರಾಜನಗರ: ವಿದ್ಯಾರ್ಥಿಗಳು ಗ್ರಂಥಾಲಯಗಳಲ್ಲಿ ಹೆಚ್ಚು ಸಮಯ ಕಳೆಯುವ ಮೂಲಕ ಜ್ಞಾನ ಸಂಪತ್ತನ್ನು ವೃದ್ಧಿಸಿಕೊಳ್ಳಿ ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಸಲಹೆ ನೀಡಿದರು.

ನಗರದ ಹೊರವಲಯದಲ್ಲಿರುವ ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಗ್ರಂಥಾಲಯದ ಸಂಪನ್ಮೂಲಗಳನ್ನು ಸದುಪಯೋಗ ಪಡಿಸಿಕೊಂಡು ಜ್ಞಾನ ಅಭಿವೃದ್ಧಿ ಪಡಿಸಿಕೊಳ್ಳಬೇಕು.ಸಮಾಜದಲ್ಲಿ ಉನ್ನತ ಸ್ಥಾನದೊಂದಿಗೆ ತಲುಪಿ ಸಮಾಜ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದರು.

ಸಂಪನ್ಮೂಲ ವ್ಯಕ್ತಿ ಮೈಸೂರು ವಿಶ್ವವಿದ್ಯಾಲಯದ ಗ್ರಂಥಪಾಲಕರಾದ ಡಾ.ಪಿ.ಸರಸ್ವತಿ ಮಾತನಾಡಿ, ಗ್ರಂಥಾಲಯಗಳು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವ ಸ್ಥಾನ ಪಡೆದಿದೆ. ವಿದ್ಯುನ್ಮಾನ ಗ್ರಂಥಾಲಯಗಳನ್ನು ಉಚಿತವಾಗಿ ಬಳಸಿಕೊಂಡು ಹೆಚ್ಚಿನ ಜ್ಞಾನ ಸಂಪಾದಿಸಿ ಎಂದು ಹೇಳಿದರು.

ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಾಪಕ ಡಾ. ಎಂ.ಮಹದೇವಮೂರ್ತಿ, ಶ್ವೇತ, ಸವಿತ, ಮಹದೇವಸ್ವಾಮಿ, ಕವಿತಾ ಹಾಗೂ ಎಲ್ಲಾ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net