

ಚಾಮರಾಜನಗರ: ದೇಶದ ಅಭಿವೃದ್ಧಿಯಲ್ಲಿ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಕೊಡುಗೆ ಶೇ.50 ರಷ್ಟಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆ್ ಇಂಡಿಯಾ ವ್ಯವಸ್ಥಾಪಕಿ ಸುನಂದಾ ಬಾಟ್ರೆ ತಿಳಿಸಿದರು.
ನಗರದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆರ್‌ಬಿಐ ಹಾಗೂ ಇನ್ನಿತರೆ ಬ್ಯಾಂಕ್‌ಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಟೌನ್‌ಹಾಲ್ ಕಾರ್ಯಕ್ರಮ ಹಾಗೂ ಉದ್ಯಮ್ ಕಾರ್ಡ್ ನೋಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಒಂದು ಜಿಲ್ಲೆಯ ಅಭಿವೃದ್ಧಿಯನ್ನು ಆಭಾಗದ ರಸ್ತೆಗಳ ಅಭಿವೃದ್ಧಿಯಲ್ಲಿ ನಿರ್ಧರಿಸಬಹುದಾಗಿದೆ. ಜಿಲ್ಲೆಯು ಕೈಗಾರಿಕೆ ಮತ್ತು ಜಿಡಿಪಿಯಲ್ಲಿ ಸಾಕಷ್ಟು ಹಿಂದುಳಿದಿದ್ದು, ಇಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹೆಚ್ಚು ಅಭಿವೃದ್ಧಿ ಹೊಂದಬೇಕಾಗಿದೆ. ಆಗಾಗಿ ಹೆಚ್ಚಿನ ಜನರು ಉದ್ಯಮದ ಕಡೆಮುಖಮಾಡಬೇಕಾಗಿದ್ದು, ದೇಶದ ಜಿಡಿಪಿ ಅಭಿವೃದ್ಧಿಯಲ್ಲಿ ಈ ಭಾಗದ ಜನರು ಹೆಚ್ಚಿನ ಕೊಡುಗೆ ನೀಡಬೇಕಿದೆ ಎಂದರು.
ಜಾಗತಿಕ ಮಟ್ಟದಲ್ಲಿ ಸಾಕಷ್ಟು ಉದ್ಯಮಗಳು ಬರುತ್ತದೇ, ಆದರೆ ಸ್ಥಳೀಯವಾಗಿರುವ ತಂತ್ರಜ್ಞಾನ ಮತ್ತು ಸವಲತ್ತುಗಳನ್ನು ಬಳಸಿಕೊಂಡು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಅಭಿವೃದ್ಧಿಯತ್ತಾ ಕೊಂಡೊಯ್ಯಬೇಕಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ರಾಷ್ಟ್ರವ್ಯಾಪಿ ಎಂಎಸ್‌ಎಂಇ ಸಮೀಕ್ಷೆ ನಡೆಸಿ ಸಣ್ಣ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಉದ್ಯಮಿಗಳ ಜತೆಗೆ ಬ್ಯಾಂಕ್‌ಗಳು ಸದಾ ಬೆನ್ನೆಲುಬಾಗಿರುತ್ತದೆ ಎಂದು ಭರವಸೆ ನೀಡಿದರು.
ಕೈಗಾರಿಕೆ ಇಲಾಖೆ ಉಪನಿರ್ದೇಶಕ ರಾಜೇಂದ್ರ ಪ್ರಸಾದ್ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರ್ಥಿಕವಾಗಿ ಸ್ವಾವಲಂಬನೆ ಹೊಂದುವುದು ಅಗತ್ಯವಾಗಿದೆ. ಈ ಭಾಗದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು ಹೆಚ್ಚಾಗಿದ್ದು, ಅವರಿಗೆ ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಜಾಗೃತಿ ಕಡಿಮೆ ಇದೆ. ಜಿಲ್ಲೆಯಲ್ಲಿ ಶೇ.59 ರಷ್ಟು ಅರಣ್ಯ ಪ್ರದೇಶವಿದ್ದು, ಇಲ್ಲಿರುವ ಸಾಕಷ್ಟು ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ಸಣ್ಣ ಪ್ರಮಾಣದ ಉದ್ಯಮಗಳನ್ನು ಪ್ರಾರಂಭಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ವಿಭಾಗೀಯ ನಿರ್ದೇಶಕ ಪಾಂಡುರಂಗರಾಯ್, ಎಸ್ಸಿ ಎಸ್ಟಿ ಉದ್ಯಮಿದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಸಿದ್ದಪ್ಪಶೆಟ್ಟಿ, ರಾಜೇಶ್‌ಕುಮಾರ್, ಆರ್‌ಸಿಡಿ ನಿರ್ದೇಶಕ ರಾಕೇಶ್ ಅತುಲ್, ಡಾ.ಮಾದೇಗೌಡ ಹಾಗೂ ಇತರರು ಉಪಸ್ಥಿತರಿದ್ದರು.