

ಚಾಮರಾಜನಗರ : ಮನುಷ್ಯನಿಗೆ ಕಣ್ಣು ಅತ್ಯಂತ ಅವಶ್ಯಕ ಅಂಗವಾಗಿದ್ದು, ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಶ್ರೀಶನೈಶ್ಚರ ದೇವಸ್ಥಾನ ಸಮಿತಿ ಅಧ್ಯಕ್ಷ ಸಿ.ಎಲ್.ರಂಗರಾಮ್ ತಿಳಿಸಿದರು.
ತಾಲೂಕಿನ ಚಂದಕವಾಡಿ ಗ್ರಾಮದ ಶ್ರೀಶನೈಶ್ಚರ ದೇವಸ್ಥಾನದ ಆವರಣದಲ್ಲಿ ಶ್ರೀಶನೈಶ್ಚರ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಭಾನುವಾರ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀಶನೈಶ್ಚರ ದೇವಸ್ಥಾನದ 21 ನೇ ವರ್ಷದ ವಿಗ್ರಹ ಆರಾಧನಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿವಾರ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪ್ರತಿವರ್ಷದಂತೆಯೇ ಈ ವರ್ಷವೂ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಹರಿದು ಬಂದಿದ್ದಾರೆ ಎಂದರು.
ಕಳೆದ 2 ವರ್ಷಗಳಿಂದ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ವರ್ಷವೂ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಶಿಬಿರಲ್ಲಿ 500 ಕ್ಕಿಂತಲೂ ಹೆಚ್ಚು ಜನರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀಶನೈಶ್ಚರ ದೇವಸ್ಥಾನ ಸಮಿತಿಯ ನಾಗೇಂದ್ರ, ಪುಟ್ಟರಾಮು, ಉಮಾಪತಿ, ಸೆಲ್ವಾ, ಶಂಕರ್, ಶಿವು, ರಾಘವೇಂದ್ರ, ರಾಜೇಶ್ವರಿ, ಮಾಲಿನಿ, ಮಮತಾ, ಗಾಯಿತ್ರಿ, ಡಾ.ನವೀನ್, ಡಾ.ಚಂದ್ರವಧನ್ ಹಾಗೂ ಇತರರು ಉಪಸ್ಥಿತರಿದ್ದರು.