ಜಾತಿ ರಹಿತ ಸಮಾಜದ ಕನಸುಗಾರ ಕನಕಶ್ರೀ

30chn2(Congrss Kanagadasa jayanthi)
Published on

ಚಾಮರಾಜನಗರ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಶ್ರೀಕನಕದಾಸ ಜಯಂತಿಯನ್ನು ಆಚರಣೆ ಮಾಡಲಾಯಿತು.

ಈ ವೇಳೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ದಾಸ ಪರಂಪರೆಯಲ್ಲಿ ಕನಕದಾಸರು ಪ್ರಮುಖರಾಗಿದ್ದು, ಸಮಾಜದಲ್ಲಿ ಸಮಾನತೆ ನೆಲೆಸಲು ಶ್ರಮಿಸಿದ ಮಹಾನ್ ಸಂತ. ಕುಲ ಕುಲವೆಂದು ಹೊಡೆದಾಡದಿರಿ ಕುಲದ ನೆಲೆಯನ್ನೇನಾದರೂ ಬಲ್ಲಿರಾ ಎಂದು ಪ್ರಶ್ನಿಸಿ ಜಾತಿಯ ವ್ಯವಸ್ಥೆಯನ್ನು ವಿರೋಧಿಸಿದ್ದರು. ಜಾತಿ ರಹಿತ ಸಮಾಜದ ಕನಸುಗಾರ ಕನಕಶ್ರೀ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಸಮಾಜ ಸುಧಾರಣೆಗೆ ದುಡಿದ ಮಹಾನ್ ದಾರ್ಶನಿಕರನ್ನು ಕೇವಲ ಆಚರಣೆಗಳಿಗೆ ಸೀಮಿತವಾಗಿ ಮಾಡಬಾರದು. ಅವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಂಡು ಅವರ ಹಾದಿಯಲ್ಲಿ ಸಾಗಬೇಕು. ಅವರ ಜೀವನಚರಿತ್ರೆಯನ್ನು ಅಧ್ಯಯನ ಮಾಡುವ ಕಾರ್ಯ ಪ್ರಸ್ತುತ ಸಂದರ್ಭದಲ್ಲಿ ನಡೆಯಬೇಕಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುವರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹಾದೇವ, ಆರ್.ಮಹದೇವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಮಾಧ್ಯಮ ಕಾರ್ಯದರ್ಶಿ ವಕೀಲ ಅರುಣ್‌ಕುಮಾರ್, ನಗರಸಭಾ ಸದಸ್ಯೆ ಚಿನ್ನಮ್ಮ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆರಹಳ್ಳಿ ನವೀನ್, ಸೋಮನಾಯಕ, ಸಿ.ಕೆ.ರವಿಕುಮಾರ್, ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಸ್ವಾಮಿ, ಸೈಯದ್‌ರಫಿ, ಕಾಗಲವಾಡಿ ಶಿವಸ್ವಾಮಿ, ಚಂದ್ರು, ಪೃಥ್ವಿ, ರಾಜು, ಮರಿಯಾಲದಹುಂಡಿ ಕುಮಾರ್, ಸೇವಾದಳದ ಜಯರಾಜು, ಶೇಷಣ್ಣ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಸೋಮಣ್ಣ, ನಾಗಯ್ಯ, ನಸ್ರುಲ್ಲಾಖಾನ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net