

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ನಗರದ ಶ್ರೀ ಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟಕಾರರು ಶ್ರೀ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಹಾಕಿ ಆಕ್ರೋಶವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ಗೋಪಾಲ್, ಮಹೇಶ್‌ಗೌಡ, ಗು.ಪುರುಷೋತ್ತಮ್, ವೀರಭದ್ರ, ತಾಂಡವಮೂರ್ತಿ, ರಾಜಪ್ಪ, ಪ್ರಕಾಶ್, ಮಂಜು ಇತರರು ಭಾಗವಹಿಸಿದ್ದರು.