

ಚಾಮರಾಜನಗರ: ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ತರಕಾರಿ ಸೊಪ್ಪು ಆಹಾರವನ್ನು ಸೇವಿಸಬೇಕು ಎಂದು ಡಾ.ಆರ್.ಎಸ್.ನಾಗಾರ್ಜುನ್ ಸಲಹೆ ನೀಡಿದರು.
ನಗರದ ಜೆಎಸ್‌ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿನಿಯರ ಸಂಘದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಹದಿಹರೆಯದಲ್ಲಿ ಆರೋಗ್ಯ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಏನೇ ಸಮಸ್ಯೆ ಬಂದರೂ ಗೂಗಲ್ ಸರ್ಚ್ ಮಾಡುತ್ತಾರೆ. ಇದನ್ನು ಅಭ್ಯಾಸ ಮಾಡಿಕೊಳ್ಳದೆ ಆರೋಗ್ಯದಲ್ಲಿ ಏರುಪೇರು ಆದರೆ ಕೂಡಲೇ ಆರೋಗ್ಯ ಕೇಂದ್ರವಾಗಲಿ ಅಥವಾ ಸರ್ಕಾರಿ ಆಸ್ಪತ್ರೆಯಾಗಲಿ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಂಡರೆ ನಿಮ್ಮ ಆರೋಗ್ಯ ಗುಣಮುಖವಾಗುತ್ತದೆ. 20 ವರ್ಷ ಮೇಲ್ಪಟ್ಟ ಯುವಕ ಯುವತಿಯರು. ಸಾಕಷ್ಟು ಆರೋಗ್ಯದಲ್ಲಿ ಏರುಪೇರು ಬಂದರೆ. ವೈದ್ಯರ ಸಲಹೆ ಇಲ್ಲದೆ ಮಾತ್ರೆಗಳನ್ನು ತೆಗೆದುಕೊಳ್ಳಬಾರದು. ಇದರಿಂದ ನಿಮ್ಮ ಆರೋಗ್ಯಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ದಿನನಿತ್ಯ ಕನಿಷ್ಠ ಮೂರು ಲೀಟರ್ ನೀರನ್ನು ಕುಡಿಯುವ ಅಭಿರುಚಿ ಬೆಳೆಸಿಕೊಳ್ಳಬೇಕು. ಬಿಳಿ ರಕ್ತ ಕಣಗಳು ಜಾಸ್ತಿ ಆಗಬೇಕಾದರೆ, ಮನೆಯಲ್ಲಿ ಪೌಷ್ಟಿಕ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು. ಜೆಂಗ್‌ುಡ್ ಆಹಾರ ಪದಾರ್ಥಗಳನ್ನು ತಿನ್ನಬಾರದು. ಎದೆ ನೋವು ಕಾನಿಸಿಕೊಂಡರೆ, ಹಾವು, ನಾಯಿ ಕಚ್ಚಿದರೆ, ಮನೆ ಮದ್ದು ನೀಡದೇ ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ಜೆಎಸ್‌ಎಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಮ್.ಸ್ವಾಮಿ ಕಾರ್ಯಕ್ರಮವನ್ನು ಮಾತನಾಡಿ, ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜತೆಗೆ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಆವಾಗ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಅಂಕಗಳು ಪಡೆಯಲು ಸಾಧ್ಯವಾಗುತ್ತದೆ. ವೈಯಕ್ತಿಕ ಸಮಸ್ಯೆಗಳು ಬಂದಲ್ಲಿ ನಿಮ್ಮ ತಾಯಿ ಅಥವಾ ನಿಮ್ಮ ಗೆಳತಿ, ನಿಮ್ಮ ಶಿಕ್ಷಕಿಯರ ಬಲಿ ಮಾಹಿತಿ ನೀಡುವ ಅಭಿರುಚಿ ಬೆಳೆಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಎಂ.ಮಲ್ಲಿಕಾರ್ಜುನ ಸ್ವಾಮಿ, ಹಿರಿಯ ವಿದ್ಯಾರ್ಥಿನಿಯರ ಸಂಘದ ಅಧ್ಯಕ್ಷೆ ರೂಪಶ್ರೀ, ಉಪನ್ಯಾಸಕ ಅರುಣ್, ಅಂಬಿಕಾ, ನಿರ್ಮಲ, ಶುಭ, ಜಮುನಾ, ಸೌಮ್ಯ, ಹಾಜರಿದ್ದರು.