ಕನ್ನಡ ಧ್ವಜ ಹಿಡಿದು ಪ್ರತಿಭಟನೆ

01chn10
Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಕನ್ನಡ ಬಾವುಟ ಹಿಡಿದು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಶ್ರೀ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕನ್ನಡ ಧ್ವಜ ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ಕಳೆದ 87 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ಕಣ್ಣುಮುಚ್ಚಿಕೊಂಡು ಕುಳಿತಿದ್ದು ಕರ್ನಾಟಕ ಋಣ ತೀರಿಸುವಲ್ಲಿ ವಿಫಲವಾಗಿವೆ ಎಂದು ದೂರಿದರು.

ಕೇಂದ್ರ ಸರ್ಕಾರ ಕೂಡಲೇ ಕಾವೇರಿ ನೀರು ನಿರ್ವಹಣಾ ಸಮಿತಿ ವಜಾಗೊಳಿಸಬೇಕು. ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ಚಾ.ವೆಂ.ರಾಜ್ ಗೋಪಾಲ್, ಮಹೇಶ್‌ಗೌಡ, ಗು.ಪುರುಷೋತ್ತಮ್,ಲಿಂಗರಾಜು, ರಾಜಪ್ಪ, ಚಾ.ಸಿ.ಸಿದ್ದರಾಜು, ವೀರಭದ್ರ,ಮಂಜು, ಪ್ರಕಾಶ್ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net