ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ

04chn1
Published on

ಚಾಮರಾಜನಗರ: ಚಿಕ್ಕಮಂಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಜಮಾಯಿಸಿದ ವಕೀಲರು ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ, ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ಇತ್ತೀಚೆಗೆ ವಕೀಲರ ಮೇಲೆ ಪೊಲೀಸರ ದೌರ್ಜನ್ಯಗಳು ಹೆಚ್ಚಾಗಿ ನಡೆಯುತ್ತಿದೆ. ಚಿಕ್ಕಮಂಗಳೂರಿನ ವಕೀಲ ಪ್ರೀತಮ್ ಎಂಬುವವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ವಕೀಲ ಸಮುದಾಯವನ್ನು ಅವಮಾನಗೊಳಿಸಿದ್ದಾರೆ. ಪೊಲೀಸರ ಈ ವರ್ತನೆಯನ್ನು ಜಿಲ್ಲಾ ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದರು.

ವಕೀಲರ ಮೇಲೆ ಹಲ್ಲೆ ನಡೆಸಿರುವುದು ನಿಜಕ್ಕೂ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ಸಮಾಜವನ್ನು ರಕ್ಷಣ ಮಾಡಬೇಕಾದ ಪೊಲೀಸರೇ ಈ ರೀತಿ ವರ್ತಿಸುವುದು ಸರಿಯಲ್ಲ. ಸರ್ಕಾರ ಈ ಕೂಡಲೇ ಇಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ವಕೀಲರ ರಕ್ಷಣೆಗೆ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ.ವಿರೂಪಾಕ್ಷಸ್ವಾಮಿ, ಜಂಟಿ ಕಾರ್ಯದರ್ಶಿ ಮಲ್ಲು, ಹಿರಿಯ ವಕೀಲ ಕೆ.ಬಾಲಸುಬ್ರಮಣ್ಯಂ, ಎಚ್.ಎಂ.ನಂಜುಂಡಸ್ವಾಮಿ, ಎ.ಎಸ್.ಸಿದ್ದರಾಜು, ಎನ್.ಬಿ.ಮಹೇಶ್, ಎನ್.ವಿನಾಯಕ, ಸಿ.ಸಿ.ರಮೇಶ್, ಲಕ್ಷ್ಮಿಕಾಂತ್, ನಂದೀಶ್, ಎ.ಎಸ್.ನವೀನ್ ಕುಮಾರ್, ಗಂಗಾಧರ್, ಜಿ.ಗೀರೀಶ್, ಎಸ್.ಸುಂದರ್ ರಾಜು, ಸತೀಶ್, ಪ್ರಭುಸ್ವಾಮಿ, ಪ್ರಕಾಶ್, ಮಲ್ಲೇಶ್ ಪ್ರಭು, ವಿಜಯ್, ಕೇಶವ್, ಮಹೇಂದ್ರ, ಜಗದಾಂಬಿಕಾ, ಮೇಘಶ್ರೀ, ನಾಗರಾಜು ಪಟೇಲ್, ಮಹದೇವಪ್ರಸಾದ್, ನಾಗರಾಜು, ರಾಜಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net