

ಚಾಮರಾಜನಗರ: ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಬರಹ ಮತ್ತು ಭಾಷಣ ಪುಸ್ತಕಗಳನ್ನು ಓದುವ ಮೂಲಕ ನಅವರ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ ಎಂದು ಪೊಲೀಸ್ ಇಲಾಖೆಯ ಡಾ.ಬಿ.ಆರ್.ಕೃಷ್ಣಕುಮಾರ್ ಸಲಹೆ ನೀಡಿದರು.
ನಗರದ ಹೊರವಲಯದಲ್ಲಿರುವ ಸ್ನಾತಕೋತ್ತರ ವಿದ್ಯಾರ್ಥಿನಿ ನಿಲಯದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ 67 ನೇ ಪರಿನಿಬ್ಬಾಣ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಭಾರತ ಸಂವಿಧಾನ ಪ್ರಚಂಚದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದ್ದು, ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಅವರ ಮಾರ್ಗದಲ್ಲಿ ಸಾಗೋಣ ಎಂದರು.
ನಿಲಯ ಪಾಲಕಿ ಭಾಗ್ಯಮ್ಮ ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನಾಚರಣೆಯನ್ನು ವಿಶ್ವಸಂಸ್ಥೆ ವಿಶ್ವಜ್ಞಾನ ದಿನವನ್ನಾಗಿ ಘೋಷಣೆ ಮಾಡಿದೆ. ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮಕ್ಕೂ ಮೊದಲು ಸುವರ್ಣ ಗಂಗೋತ್ರಿಯಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ, ಅಲ್ಲಿಂದ ವಿದ್ಯಾರ್ಥಿನಿ ನಿಲಯದವರೆಗೆ ಮೊಂಬತ್ತಿ ಮೆರವಣೆ ನಡೆಸಲಾಯಿತು.
ಈ ವೇಳೆ ಕಾಗಲವಾಡಿಚಂದ್ರು, ಗುರುರಾಜ್, ಡಾ.ಕುಮಾರ್ ಚಿಕ್ಕಹೊಳೆ, ಡಾ.ನಿಂಗರಾಜು, ಡಾ.ಮಹದೇವಮೂರ್ತಿ, ಡಾ.ನಾಗೇಶ್, ಗೋವಿಂದ, ನಿಲಯಪಾಲಕಿ ನಾಗರತ್ನ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.