ಕಾವೇರಿ ವಿಚಾರದಲ್ಲಿ ಸಂಸದರು ಕಾಣೆ

09chn3
Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಾವೇರಿ ನಿರ್ವಹಣಾ ಮಂಡಳಿ ತಮಿಳುನಾಡು ಪರ ಕೆಲಸ ಮಾಡುತ್ತಿದ್ದು, ಪ್ರತಿ ಸಾರಿಯೂ ತಮಿಳುನಾಡಿನ ಪರ ತೀರ್ಪು ನೀಡುತ್ತಾ ಬಂದಿದೆ. ಈ ಸಮಿತಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಬೇಕು. ಈ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ರಾಜ್ಯದ ಸಂಸದರು ಮೌನವಾಗಿದ್ದು, ಕಾಣೆಯಾಗಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ರಾಜ್ ಗೋಪಾಲ್, ಗು.ಪುರುಷೋತ್ತಮ, ನಿಜಧ್ವನಿಗೋವಿಂದರಾಜು, ಲಿಂಗರಾಜು,ಮಹೇಶ್ ಗೌಡ, ರಾಜಪ್ಪ, ತಾಂಡವಮೂರ್ತಿ, ವೀರಭದ್ರ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net