

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,
ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ರಾಜ್ಯದ ಸಂಸದರು ಮೌನವಾಗಿದ್ದು, ಕಾಣೆಯಾಗಿದ್ದಾರೆ. ಈ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ಕಣ್ಣುಮುಚ್ಚಿಕೊಂಡಿದ್ದು, ಕರ್ನಾಟಕ ಋಣ ತೀರಿಸುವಲ್ಲಿ ವಿಫಲವಾಗಿವೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಮಹೇಶ್ ಗೌಡ, ವೀರಭದ್ರ, ತಾಂಡವಮೂರ್ತಿ, ಪ್ರಕಾಶ್, ರಾಜಪ್ಪ, ನಾಗೇಂದ್ರಗೌಡ ಇತರರು ಭಾಗವಹಿಸಿದ್ದರು.