ಕಾವೇರಿಗಾಗಿ ನಿಲ್ಲದ ಹೋರಾಟ

14chn9
Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 100 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಕೂಡ ಕಡ್ಲೆಪುರಿ, ಕಡಲೆಕಾಯಿ ತಿಂದು, ಟೀ ಕಾಯಿಸಿ ಕುಡಿದು ವಿನೂತನ ಪ್ರತಿಭಟನೆ ನಡೆಲಾಯಿತು.

ನಗರದ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಶಾಮಿಯಾನ ಹಾಕಿ, ಭುವನೇಶ್ವರಿ ಭಾವಚಿತ್ರವಿಟ್ಟು ಕಡ್ಲೆಪುರಿ, ಕಡಲೆಕಾಯಿ ತಿಂದು, ಟೀ ಕಾಯಿಸಿ ಕುಡಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾಪಡೆ ಅಧ್ಯಕ್ಷ .ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ಕ್ರಮವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ತಮಿಳು ಸಂಘಟನೆಗಳು ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಇನ್ನಿತರ ಸಂಘಟನೆಗಳು ಸೇರಿ ಸತತವಾಗಿ 100ನೇ ದಿನದ ಹೋರಾಟ ಮಾಡಲಾಗುತ್ತಿದೆ. ಈ ಚಳವಳ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಡಲಾಗುತ್ತಿದೆ. ಈಗಾಗಲೇ ಜಲಾಶಯಗಳು ಬತ್ತಿ ಹೋಗಿವೆ. ಕರ್ನಾಟಕದಲ್ಲಿ ನೀರು ಇಲ್ಲ. ತಮಿಳುನಾಡಿ ಜೊತೆ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುಲು ನಮ್ಮ ನೀರನ್ನು ತಮಿಳುನಾಡಿಗೆ ಬಿಡುತ್ತೀದ್ದೀರಿ ಇದರಿಂದ ರಾಜ್ಯದ ಜನತೆ, ರೈತರಿಗೆ ತೊಂದರೆಯಾಗುತ್ತದೆ. ತಕ್ಷಣವೇ ನೀರು ನಿಲ್ಲಿಸದಿದ್ದರೆ ರಾಜ್ಯದ ಜನತೆ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪಣ್ಯದಹುಂಡಿ ರಾಜು, ಮಹೇಶ್‌ಗೌಡ, ಗು.ಪುರುಷೋತ್ತಮ್, ಸಿ.ಕೆ.ಮಂಜುನಾಥ್, ಸಿ.ಎಂ.ಕೃಷ್ಣಮೂರ್ತಿ, ರೈತ ಮುಖಂಡರಾದ ಹೊನ್ನೂರುಪ್ರಕಾಶ್, ಬಸವಣ್ಣ, ಚಿನ್ನಸ್ವಾಮಿಗೌಂಡರ್, ಉಡಿಗಾಲ ಕುಮಾರಸ್ವಾಮಿ, ತಮಿಳು ಸಂಘದ ಜಗದೀಶ್, ನಿಜಧ್ವನಿಗೋವಿಂದರಾಜು, ರಾಮಸಮುದ್ರ ಸುರೇಶ್, ಚಾ.ರಾ.ಕುಮಾರ್, ಚಾ.ಹ.ರಾಮು, ರವಿಚಂದ್ರಪ್ರಸಾದ್, ಚಾ.ಸಿ.ಸಿದ್ದರಾಜು, ಪ್ರಶಾಂತ್, ತಾಂಡವಮೂರ್ತಿ, ವೀರಭದ್ರ, ರಾಚಪ್ಪ, ಲಿಂಗರಾಜು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net