

ಚಾಮರಾಜನಗರ : ಇತ್ತೀಚಿನ ದಿನಗಳಲ್ಲಿ ಯುವಕರು ಮೊಬೈಲ್ ಬಳಕೆ ಹಾಗೂ ಇನ್ನಿತರ ದುಶ್ಚಟಗಳಿಗೆ ಆಳಾಗುತ್ತಿದ್ದು, ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯಲ್ಲಿ ಜೈಭೀಮ್ ವಾಲಿಬಾಲ್ ತಂಡದಿಂದ ಆಯೋಜಿಸಿದ್ದ ಎರಡು ದಿನಗಳ ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾನುವಾರ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಯುವಕರು ವಾಲಿಬಾಲ್, ಕ್ರಿಕೆಟ್, ಕಬ್ಬಡ್ಡಿ ಮತ್ತು ಇನ್ನಿತರೆ ಕ್ರೀಡೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢತೆಯನ್ನು ಸಾಧಿಸಬಹುದಾಗಿದೆ. ಈಗ ಆಯೋಜನೆ ಮಾಡಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು, ರಾಜ್ಯ ಮಟ್ಟದಲ್ಲಿ ಆಯೋಜನೆ ಮಾಡಿ. ನಾನು ಸಹ ಹೆಚ್ಚಿನ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆ ನೀಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಉಮೇಶ್ ಕುದರ್, ಸಿದ್ದು ಕುದರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಬಂಕ್ ಮಾಲೀಕರಾದ ಮಣಿ, ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್, ಗುತ್ತಿಗೆದಾರರ ಸಂಘದ ಖಜಾಂಚಿ ಮಹದೇವಯ್ಯ, ಮುಖಂಡ ಶ್ರೀಕಾಂತ್, ಕಿಚ್ಚ ಸುದೀಪ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ನಾಗೇಂದ್ರ, ಬ್ರದರ್ಸ್ ಇವೆಂಟ್ ಮಾಲೀಕ ಸಂತು, ಕಾಂಗ್ರೆಸ್ ಮುಖಂಡ ಸಯ್ಯದ್ ರಫೀ, ಎನ್‌ಎಸ್ಯುಐ ರಾಜು ಪ್ರಧಾನ ಕಾರ್ಯದರ್ಶಿ ಸ್ವಾಮಿ, ಬಡಾವಣೆಯ ಎಲ್ಲಾ ಯಜಮಾನರು ಹಾಗೂ ಜೆಬಿವಿಸಿ ತಂಡದ ಸದಸ್ಯರು ಭಾಗವಹಿಸಿದ್ದರು.