ಗಣಿತದ ಪಾತ್ರ ಬಹಳ ಮುಖ್ಯ

25 yelandur 01
Published on

ಯಳಂದೂರು: ಜನರ ನಿತ್ಯ ಜೀವನದಲ್ಲಿ ಗಣಿತದ ಪಾತ್ರ ಬಹಳ ಮುಖ್ಯ. ಆದ್ದರಿಂದ ಗಣಿತ ಕಲಿಯುವ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕೆಂದು ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕುಮಾರಸ್ವಾಮಿ ತಿಳಿಸಿದರು.

ತಾಲೂಕಿನ ಬಿಳಿಗಿರಿರಂಗನಬೆಟ್ಟ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗಣಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ಜೀವನದಲ್ಲಿ ಗಣಿತ ಒಂದಲ್ಲ ಒಂದು ರೂಪದಲ್ಲಿ ಬಳಕೆಯಾಗುತ್ತಲೇ ಇರುತ್ತದೆ. ಅದು ದೊಡ್ಡ ಮಟ್ಟದಲ್ಲಿರಬಹುದು ಇಲ್ಲವೇ ಸಣ್ಣ ಮಟ್ಟದಲ್ಲಿರಬಹುದು. ಲೆಕ್ಕಕ್ಕೂ-ಮನುಷ್ಯ ಜೀವನಕ್ಕೂ ಅವಿನಾಭಾವ ಸಂಬಂಧವಿದೆ ಎಂದರು.
ರಂಗೋಲಿ ಸ್ಪರ್ಧೆ, ವಸ್ತು ಪ್ರದರ್ಶನ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರಾದ ಜ್ಞಾನೇಂದ್ರಸ್ವಾಮಿ, ಸುನೀಲ್‌ಕುಮಾರ್, ಸುಜಾತಾ, ಉಮೇಶ್, ತ್ಯಾಗರಾಜು, ನಳಿನಾ, ರಿತೇಶ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net