ಯುವನಿಧಿ ನೋಂದಣಿ ಸೇವೆ ಆರಂಭ

27chn7
Published on

ಚಾಮರಾಜನಗರ: ಪದವಿ, ಡಿಪ್ರೋಮೊ ಮುಗಿಸಿ 6 ತಿಂಗಳು ಕಳೆದರೂ ಉದ್ಯೋಗ ಲಭಿಸದೆ ಇರುವವರಿಗೆ ನಿರುದ್ಯೋಗ ಭತ್ಯೆ ನೀಡುವ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಇಂದಿನಿಂದ (ಡಿ.26) ಆರಂಭಗೊಂಡಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಶಿಲ್ಪಾನಾಗ್ ನೃತೃತ್ವದಲ್ಲಿ ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಯುವನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು.

2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ 6 ತಿಂಗಳು ಆದರೂ ಉದ್ಯೋಗ ಸಿಗದೆ ಇರುವ ಪದವಿ, ಡಿಪ್ರೋಮೊ ನಿರುದ್ಯೋಗಿಗಳು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಬಹುದು. ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ರೋಮೊ ತೇರ್ಗಡೆಯಾದವರಿಗೆ 1,500ರೂ. ಭತ್ಯೆ ನೀಡಲಾಗುವುದು ಎಂದು ತಿಳಿಸಿದರು.
ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವವರು, ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳ ವಾಸವಿರುವ ಪದವಿ, ಡಿಪ್ಲೋಮೋ ಅಧ್ಯಯನ ಮಾಡಿರುವವರು ಯೋಜನೆಗೆ ಅರ್ಹರಾಗಲಿದ್ದಾರೆ. ಯೋಜನೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಅರ್ಹ ಪದವೀಧರರು ಬಾಪೂಜಿ ಸೇವಾಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಯಾವುದೇ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಬಹುದು. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ರೋಮೊ ಅಂಕಪಟ್ಟಿ ಪ್ರಮಾಣ ಪತ್ರದೊಂದಿಗೆ ನೊಂದಣಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ ಅಥವಾ ದೂ.ಸಂ 08226-295080 ಸಂಪರ್ಕಿಸುವಂತೆ ಹೇಳಿದರು.

ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪಕಾರ್ಯದರ್ಶಿ ಲಕ್ಷ್ಮಿ, ತಹಶೀಲ್ದಾರ್ ಬಸವರಾಜು, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆಯ ಅಧಿಕಾರಿ ಮಲ್ಲೇಶ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net