ಒಣಮೆಣಸಿನಕಾಯಿ ಹಿಡಿದು ಅಕ್ರೋಶ

27chn9
Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಒಣಮೆಣಸಿನಕಾಯಿ ಹಿಡಿದು ಪ್ರತಿಭಟನೆ ನಡೆಲಾಯಿತು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಒಣಮೆಣಸಿನಕಾಯಿ ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಾವೇರಿ ನಿರ್ವಹಣಾ ಮಂಡಳಿ ಕರ್ನಾಟಕದ ಜನರ ಪಾಲಿಗೆ ಮೆಣಸಿನಕಾಯಿ ಹಾಕಿ ಅನ್ಯಾಯ ಮಾಡಿದೆ. ಮಳೆ ಅಭಾವದಿಂದ ರಾಜ್ಯದಲ್ಲಿ ಜಲಾಶಯಗಳು ಬರಿದಾಗುತ್ತಿದ್ದು, ಬೆಳೆಗಳು ಸಂಪೂರ್ಣ ಒಣಗುತ್ತಿವೆ. ರಾಜ್ಯದಲ್ಲಿ ನೀರಿನ ಅಭಾವ ಇದ್ದು, ಮುಂದಿನ ದಿನಗಳಲ್ಲಿ ತೀವ್ರ ಬರಗಾಲ ಬರಲಿದೆ. ಹೀಗಾಗಿ ರಾಜ್ಯ ಸರ್ಕಾರ ಎಚ್ಚೆತ್ತುಗೊಂಡು ತಮಿಳುನಾಡಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್ , ನಿಜಧ್ವನಿಗೋವಿಂದರಾಜು, ಗು.ಪುರುಷೋತ್ತಮ್, ಮಹೇಶ್‌ಗೌಡ, ರವಿಚಂದ್ರಪ್ರಸಾದ್ ಕಹಳೆ, , ಪ್ರಕಾಶ್, ವೀರಭದ್ರ, ಚಾ.ಸಿ.ಸಿದ್ದರಾಜು, ಮಂಜು, ತಾಂಡವಮೂರ್ತಿ,ಲಿಂಗರಾಜು, ಇತರರು ಭಾಗವಹಿಸಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net