ಅರ್ಜುನನಿಗೆ ಶ್ರದ್ಧಾಂಜಲಿ ಸಲ್ಲಿಕೆ

31chn5
Published on

ಚಾಮರಾಜನಗರ: ಕಾಡಾನೆ ದಾಳಿಯಿಂದ ಇತ್ತೀಚೆಗೆ ಮೃತಪಟ್ಟ ದಸರಾ ಆನೆ ಅರ್ಜುನನಿಗೆ ಸಂಜೀವಿನಿ ಟ್ರಸ್ಟ್ ವತಿಯಿಂದ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಗರದ ಶ್ರೀಭುವನೇಶ್ವರಿ ವೃತ್ತದಲ್ಲಿ ಅರ್ಜುನ ಆನೆಯ ಭಾವಚಿತ್ರವಿರುವ ್ಲೆಕ್ಸ್ ಹಾಕಿ ಮೌನ ಆಚರಣೆ ಸಲ್ಲಿಸಲಾಯಿತು. ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಓಂ ಶಾಂತಿ ಸತೀಶ್ ಮಾತನಾಡಿ, ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಅಂಬಾರಿ ಹೊರುವ ಮೂಲಕ ಗಮನ ಸೆಳೆದಿದ್ದ ಅರ್ಜುನ ಆನೆ ಸಾಕಷ್ಟು ಜನರ ಪ್ರೀತಿಗೆ ಪಾತ್ರವಾಗಿತ್ತು. ಕಾಡಾನೆ ಕಾರ್ಯಾಚರಣೆ ವೇಳೆ ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು ಎಂದು ತಿಳಿಸಿದರು.
ಜೈಭುವನೇಶ್ವರಿ ಯುವಕರ ಸಂಘದ ಅಧ್ಯಕ್ಷ ಜಿ.ಬಂಗಾರು, ವಿರಾಟ್ ಶಿವು, ಕರ್ನಾಟಕ ಸೇನಾಪಡೆ ಅಧ್ಯಕ್ಷ ಶ್ರೀನಿವಾಸಗೌಡ, ಎಸ್.ಪಿ.ಬಾಲಸುಬ್ರಮಣ್ಯಂ ಗಾನಗಂಧರ್ವ ವೇದಿಕೆ ಗೌರವಾಧ್ಯಕ್ಷ ಸುರೇಶ್‌ಗೌಡ, ನಿವೃತ್ತ ಅರಣ್ಯ ಅಧಿಕಾರಿ ಪುಟ್ಟಶೇಖರಮೂರ್ತಿ, ಶಿಕ್ಷಕ ಸುರೇಶ್, ಮೋಹನ್ ಕುಮಾರ್, ಓಂ ಶಾಂತಿ ಸುಧಾ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net