ಹೊಸವರ್ಷ ಸಂಭ್ರಮಾಚರಣೆಯಲ್ಲಿ ಮಿಂದೆದ್ದ ಜನ

Published on

ಚಾಮರಾಜನಗರ : ಜಿಲ್ಲೆಯಾದ್ಯಂತ ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳು ಹಾಗೂ ಪ್ರಮುಖ ದೇವಾಲಯಗಳು ಜನಜಂಗುಳಿಯಿಂದ ತುಂಬಿದ್ದವು.

ಜಿಲ್ಲೆಯ ಹಲವು ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿವಿಧ ಅಭಿಷೇಕ ಹಾಗೂ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಹೊಸವರ್ಷದ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಕುಟುಂಬ ಸಮೇತರಾಗಿ ಜನರು ಆಗಮಿಸಿದ್ದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನ, ಶ್ರೀಆಂಜನೇಯಸ್ವಾಮಿ ದೇವಸ್ಥಾನ ಹಾಗೂ ಇನ್ನಿತರ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ಜನರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ತಾಲೂಕಿನ ಸುವರ್ಣಾವತಿ ಜಲಾಶಯ ಮತ್ತು ಚಿಕ್ಕಹೊಳೆ ಜಲಾಶಯ ಹಾಗೂ ಇನ್ನಿತರ ಪ್ರವಾಸಿ ತಾಣಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದರು. ಹೊರಗಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ನಗರದ ಹಲವು ಚಿತ್ರಮಂದಿರಗಳಲ್ಲೂ ಸಿನಿಮಾ ಆಸಕ್ತರು ಹೆಚ್ಚಾಗಿ ಕಂಡುಬಂದರು. ಹೊಸ ವರ್ಷದ ಅಂಗವಾಗಿ ಕುಟುಂಬ ಸಮೇತರಾಗಿ ಬಂದು ಸಿನಿಮಾ ವೀಕ್ಷಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net