ಬಿಜೆಪಿ ಬಾವುಟ ತೆರವು ವಿರುದ್ದ ಪ್ರತಿಭಟನೆ

06chn2
Published on

ಚಾಮರಾಜನಗರ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲು ನಗರದಲ್ಲಿ ಹಾಕಿದ್ದ ಬಾವುಟಗಳನ್ನು ತೆರವುಗೊಳಿಸಲಾಗಿದ್ದು, ಇದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಶ್ರೀಭುವನೇಶ್ವರಿ ವೃತ್ತದಲ್ಲಿ ಶುಕ್ರವಾರ ರಾತ್ರಿ ಕೊಟ್ಟಿದ್ದ ಬಾವುಟಗಳನ್ನು ಶನಿವಾರ ಬೆಳಗಾಗುವುದರೊಳಗೆ ತೆರವುಗೊಳಿಸಲಾಗಿತ್ತು. ಇದನ್ನು ವಿರೋಧಿಸಿ ನಗರಸಭೆ, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ವಿಜಯವಾಣಿಯೊಂದಿಗೆ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಿ.ಬಿ.ಸೂರ್ಯಕುಮಾರ್ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮನದ ಹಿನ್ನೆಲೆಯಲ್ಲಿ ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಬಾವುಟ ಕಟ್ಟಲಾಗಿತ್ತು. ಆದರೆ ಶ್ರೀಭುವನೇಶ್ವರಿ ವೃತ್ತದಲ್ಲಿ ಇದನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಮೂಡ್ಲುಪುರ ನಂದೀಶ್, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಆನಂದ್ ಭಗೀರಥ, ಉಪಾಧ್ಯಕ್ಷ ಶಿವು ವಿರಾಟ್, ಪೃಥ್ವಿ, ಪ್ರಮೋದ್, ಕೂಸಣ್ಣ ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net