ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ

23raju9
Published on

ಚಾಮರಾಜನಗರ: ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಡಿಎಸ್‌ಒ ಜಿಲ್ಲಾ ನಿಯೋಗದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದಲೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಲೇ ಇದೆ. ಮುಖ್ಯವಾಗಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಪದವಿ ಕಾಲೇಜುಗಳಲ್ಲಿನ ಶುಲ್ಕ ಏರಿಕೆ, ಮೂಲ ಸೌಕರ್ಯದ ಕೊರತೆ, ವಿದ್ಯಾರ್ಥಿವೇತನ ಮತ್ತು ಹಾಸ್ಟೆಲ್ಗಳಿಲ್ಲದೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ನಿರಾಶಕ್ತಿ ತೋರುತ್ತಿದ್ದಾರೆ. ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ. ಮೂಲ ಸೌಕರ್ಯಗಳನ್ನು ಒದಗಿಸಿ ಪ್ರವೇಶಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಿ. ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಖಾತ್ರಿಪಡಿಸಿ ಶುಲ್ಕ ವಿನಾಯಿತಿಯನ್ನು ಪ್ರವೇಶಾತಿ ಸಂದರ್ಭದಲ್ಲಿಯೇ ಒದಗಿಸಿ. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿ ಎಂಬ ವಿವಿಧ ಬೇಡಿಕೆ ಪತ್ರವನ್ನು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದರು.

ನಿಯೋಗದಲ್ಲಿ ಜಿಲ್ಲಾ ಸಂಚಾಲಕಿ ಆಸಿಯ ಬೇಗಂ, ಸದಸ್ಯ ಗೌತಮ್, ಚಂದನಾ, ರೂಪಾ, ಕೆಂಪಮ್ಮ, ಸಿದ್ದರಾಜು, ಲಿಂಗರಾಜ ನಾಯಕ್, ನಂದೀಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net