ಕಾಂಗ್ರೆಸ್ ಬೆಂಬಲಿತರ ಗೆಲುವು

09rajesh06
Published on


ಬೇಗೂರು: ಹಿರಿಕಾಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಸಂಘದ ಕಚೇರಿಯಲ್ಲಿ ಒಟ್ಟು 12 ನಿರ್ದೇಶಕರ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆಯಿತು. ಇದರಲ್ಲಿ ಕಾಂಗ್ರೆಸ್ ಬೆಂಬಲಿತ 11 ಅಭ್ಯರ್ಥಿಗಳು, ಬಿಜೆಪಿ ಬೆಂಬಲಿತ ಓರ್ವ ಅಭ್ಯರ್ಥಿ ಜಯಗಳಿಸಿದರು. ಕಾಂಗ್ರೆಸ್ ಬೆಂಬಲಿತರಾದ ಎಚ್.ಎಸ್.ದೇವಣ್ಣ, ಲಿಂಗರಾಜು, ಪ್ರಕಾಶ್, ಮಹದೇವ ನಾಯಕ, ಮಹೇಶ್, ಸತೀಶ್, ಸಿದ್ದರಾಜು, ಮಹೇಂದ್ರ, ಲೀಲಾವತಿ, ಯಶೋದಮ್ಮ, ಬೀರೇಗೌಡ ಗೆದ್ದು ನಿರ್ದೇಶಕರಾಗಿ ಆಯ್ಕೆಯಾದರು. ಉಳಿದ 1 ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿ.ಬಿ.ಕುಮಾರಸ್ವಾಮಿ ಆಯ್ಕೆಯಾದರು.

ವಿಜೇತ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಪಕ್ಷದ ಮುಖಂಡರು ಸನ್ಮಾನಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ಮುನಿರಾಜು, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಂಗಾರ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯ ಬೋರ್‌ವೆಲ್ ಮಹೇಶ್, ಮಡಿವಾಳ ಸಂಘದ ಅಧ್ಯಕ್ಷ ಸಿದ್ದರಾಜು, ವಕೀಲ ಕಿರಣ್, ಮುಖಂಡರಾದ ಅಂಬರೀಶ್, ಪುರುಷೋತ್ತಮ್, ಮಹದೇವಪ್ಪ ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net