ಇಂದು ವಿಶ್ವ ಮಹಿಳಾ ದಿನಾಚರಣೆ

Published on

ಚಾಮರಾಜನಗರ: ರಂಗತರಂಗ ಟ್ರಸ್ಟ್, ಜನ ಹಿತಾಸಕ್ತಿ ಹೋರಾಟ ವೇದಿಕೆ ವತಿಯಿಂದ ನಗರದಲ್ಲಿ ಮಾ.10ರಂದು ವಿಶ್ವ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಶುರುವಾಗಲಿರುವ ಕಾರ್ಯಕ್ರಮವನ್ನು ಸಾಹಿತಿ ಶೀಲಾ ಸತ್ಯೇಂದ್ರಸ್ವಾಮಿ ಉದ್ಘಾಟಿಸುವರು. ಜನ ಹಿತಾಸಕ್ತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್ ಪ್ರಾಸ್ತಾವಿಕ ನುಡಿಗಳನ್ನಾಡುವರು. ಹಿರಿಯ ವಕೀಲೆ ನಾಗಲಕ್ಷ್ಮೀ ಆಶಯ ನುಡಿಗಳನ್ನಾಡುವರು. ಟ್ರಸ್ಟ್ ಅಧ್ಯಕ್ಷ ಸೋಮಶೇಖರ ಬಿಸಲ್ವಾಡಿ ಅಧ್ಯಕ್ಷತೆ ವಹಿಸುವರು. ಇದೇ ವೇಳೆ ದಲಿತ ಹಕ್ಕುಗಳಸಮಿತಿ ರಾಜ್ಯ ಸಂಚಾಲಕಿ ಪಾರ್ವತಮ್ಮ, ಜನಪದ ಕಲಾವಿದೆ ತುಳಸಮ್ಮ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net