

ಚಾಮರಾಜನಗರ: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಲಾನುಭವಿಗಳ ಸಮಾವೇಶ ಮಾ.12 ರಂದು ನಡೆಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಶಾಸಕ ಮತ್ತು ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಪುಟ್ಟರಂಗಶೆಟ್ಟಿ ಮನವಿ ಮಾಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕುರಿತು ಪಕ್ಷದ ಮುಖಂಡರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂತು 9 ತಿಂಗಳಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆದುಕೊಂಡಿದ್ದಾರೆ. ಐದು ಗ್ಯಾರಂಟಿಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಯೋಜನೆ, ಅನ್ನ ಭಾಗ್ಯ ಹಾಗೂ ವಿದ್ಯಾನಿಧಿ ಯೋಜನೆಯನ್ನು ಜಾರಿ ಮಾಡಿ, ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈ ಎಲ್ಲಾ ಫಲಾನುಭವಿಗಳನ್ನು ಸಂಘಟನೆ ಮಾಡಿ, ಜಿಲ್ಲಾ ಕೇಂದ್ರದಲ್ಲಿ ಮಾ. 12 ರಂದು ಜಿಲ್ಲಾಡಳಿತದಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಆಯೋಜನೆ ಮಾಡಿದೆ. ಜಿಲ್ಲಾಡಳಿತ ವತಿಯಿಂದ ನಡೆಯುವ ಈ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಸಂಘಟಿಸಿ, ಸಮಾವೇಶಕ್ಕೆ ಕರೆತರುವ ಜವಾಬ್ದಾರಿ ನಮ್ಮದಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿರುವ ಗ್ಯಾರಂಟಿ ಯೋಜನೆಯ ಫಲಾನುಭವಿಗಳನ್ನು ಸಂಘಟಿಸಿ, ಸಮಾವೇಶಕ್ಕೆ ಕರೆತರುವ ಮೂಲಕ ಸಮಾವೇಶ ಯಶಸ್ವಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್.ಮಹದೇವ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪು.ಶ್ರೀನಿವಾಸನಾಯಕ, ಸಿ.ಎ.ಮಹದೇವಶೆಟ್ಟಿ, ಜಿ.ಪಂ.ಮಾಜಿ ಸದಸ್ಯರಾದ ಕೆರೆಹಳ್ಳಿ ನವೀನ್, ರಮೇಶ್, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅಫ್ಜಲ್ ಷರೀಪ್, ಮುಖಂಡರಾದ ಸೈಯದ್ ರಫಿ, ಎಎಚ್‌ಎನ್ ಖಾನ್, ಎಪಿಎಂಸಿ ಅಧ್ಯಕ್ಷ ಸೋಮೇಶ್, ನಿರ್ದೇಶಕರಾದ ಆಲೂರು ಪ್ರದೀಪ್, ಮಾಜಿ ಅಧ್ಯಕ್ಷ ಶಿವಸ್ವಾಮಿ, ನಾಗೇಂದ್ರ, ಮುಖಂಡರಾದ ಮಹೇಶ್‌ಕುದರ್, ಎಸ್‌ಪಿಕೆ ಉಮೇಶ್, ಕಾಗಲವಾಡಿ ಚಂದ್ರು, ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ, ನಾಗೇಂದ್ರ, ಎಸ್.ರಾಜು, ದೊಡ್ಡರಾಯಪೇಟೆ ಮೂರ್ತಿ, ರವಿಗೌಡ, ಮಹದೇವಸ್ವಾಮಿ, ಮಹದೇವಶೆಟ್ಟಿ, ಮೋಹನ್ ನಗು, ಶಂಕುತಲಾ, ಅಕ್ಷಯ್‌ಕುಮಾರ್, ಪುರುಷೋತ್ತಮ್, ಮಹೇಶ್, ರವಿಬಿಸಲವಾಡಿ ಹಾಗೂ ಇತರರು ಹಾಜರಿದ್ದರು.