

ಚಾಮರಾಜನಗರ: ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಅವರ ಸಮಾಧಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ ಸಲ್ಲಿಸಿದರು.
ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿರುವ ಸಂಸದ ಧ್ರುವನಾರಾಯಣ್ ಅವರ ಸಮಾಧಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಧ್ರುವ ಅವರಿಗೆ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ, ರೇಷ್ಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಮಾಜಿ ಸಂಸದ ಸಿದ್ದರಾಜು, ಕಾಗಲವಾಡಿ ಶಿವಣ್ಣ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿ.ಎನ್.ನಂಜುಂಡಸ್ವಾಮಿ ಹಾಗೂ ಅಭಿಮಾನಿಗಳು ಹಾಜರಿದ್ದರು.