

ಚಾಮರಾಜನಗರ: ಸಂವಿಧಾನ ಬದಲಾಯಿಸುವುದೇ ಬಿಜೆಪಿ ಅಜೆಂಡಾ ಸಂಸದ ಅನಂತ ಕುಮಾರ್ ಹೆಗಡೆ ಮೂಲಕ ಅದನ್ನು ಹೇಳಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಮಾಧ್ಯಮವರೊಂದಿಗೆ , ಅನಂತಕುಮಾರ್ ಹೆಗಡೆ ಆರ್ಡಿನರಿ ವ್ಯಕ್ತಿ ಅಲ್ಲ, 5 ಸಲ ಸಂಸದರಾಗಿದ್ದವರು, ಸಚಿವರಾಗಿದ್ದವರು. ಸಂವಿಧಾನ ಬದಲಿನ ವಿಚಾರ ಹೇಳಬೇಕಾದರೆ ಪಕ್ಷದ ತೀರ್ಮಾನ ಆಗಿರದೇ ಹೇಳಲು ಆಗತ್ತಾ, ಅವರ ವಿರುದ್ಧ ಏನಾದರೂ ಕ್ರಮ ತೆಗೆದುಕೊಂಡರಾ ಎಂದು ಪ್ರಶ್ನೆ ಮಾಡಿದರು.
ಮನುಸ್ಮೃತಿ ಮೇಲೆ ನಂಬಿಕೆ ಇಟ್ಟಿರುವ ಪಕ್ಷ ಅದಾಗಿದ್ದು, ಮನುವಾದದಲ್ಲಿ ನಂಬಿಕೆ ಇಟ್ಟವರು, ಸಂವಿಧಾನ ಜಾರಿಯಾದ ದಿನದಿಂದಲೂ ಅವರು ಸಂವಿಧಾನ ವಿರೋಧ ಮಾಡಿಕೊಂಡೇ ಬಂದಿದ್ದಾರೆ, ಈಗ ಅನಂತ ಕುಮಾರ್ ಹೆಗ್ಡೆ ಮೂಲಕ ಹೇಳಿಸುತ್ತಿದ್ದಾರೆ ಎಂದರು.