ಪ್ರತಾಪ್ ಸಿಂಹಗೆ ಟಿಕೆಟ್ ಯಾಕೆ ಕೊಡ್ತಿಲ್ಲ ಅಂತ ಸಿಎಂ ಸಿದ್ದು ಹೇಳ್ತಿದ್ದಾರೆ…

12rajesh20
Published on

ಚಾಮರಾಜನಗರ: ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆ ಅಂತ ಅವರಿಗೆ ಟಿಕೆಟ್ ಕೋಡ್ತಿಲ್ಲ ಅನ್ಸುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆ ಅಂತ ಅವರಿಗೆ ಟಿಕೆಟ್ ಕೋಡ್ತಿಲ್ಲ ಅನ್ಸುತ್ತೆ. ಅದನ್ನ ಬಿಟ್ಟು ನೀವೇ ಸೃಷ್ಠಿ ಮಾಡಿ ಹೊಂದಾಣಿಕೆ ರಾಜಕೀಯ ಅಂತ ಹೇಳಿದ್ರೆ ಎಂದು ಹೇಳಿದರು.

ನನಗೆ ಟಿಕೆಟ್ ಕೊಟ್ರೆ ಸಿಎಂ ಕುರ್ಚಿ ಹೋಗುತ್ತೆ ಎನ್ನುವ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿ, ಓಹ್… ಎರಡು ಸಲ ಎಂಪಿ ಆಗಿದ್ದ ಅಲ್ವಾ ಯಾಕೆ ನನ್ನ ಕುರ್ಚಿ ಅಲುಗಾಡಲಿಲ್ಲ. ನಮಗೆ ಬಿಜೆಪಿ ಯಾರನ್ನ ಅಭ್ಯರ್ಥಿ ಮಾಡ್ತಾರೆ ಎನ್ನುವ ಪ್ರಶ್ನೆ ಇಲ್ಲ. ನಾವು ಬಿಜೆಪಿನ ಸೋಲಿಸಬೇಕು ಅಷ್ಟೇ. ನಾವು ಕಾಂಗ್ರೆಸ್ ಬಡವರ ಪರ ನೀಡಿರುವ ಅಭಿವೃದ್ಧಿಗಳ ಮೇಲೆ ಅವಲಂಬನೆ ಆಗಿದ್ದೇವೆ ಅಷ್ಟೇ. ಅದನ್ನ ಬಿಟ್ಟು ಬಿಜೆಪಿ ಅಭ್ಯರ್ಥಿ ಮೇಲೆ ಅಲ್ಲ. ನಾವು ಬಿಜೆಪಿ ನ ಸೋಲಿಸುತ್ತೆವೆ ಅಷ್ಟೇ ಎಂದರು.

ಮೈಸೂರಿನಲ್ಲಿ ಸಿಎಂ ಹಾಗೂ ಯಡಿಯೂರಪ್ಪ ನಡುವೆ ಹೊಂದಾಣಿಕೆ ರಾಜಕಾರಣ ವಿಚಾರ. ಯವನ್ನೋ ಒಬ್ಬ ದಾರಿಯಲ್ಲಿ ಹೋಗುವವರು ಹೇಳಿದ್ರೆ ಆಗಲ್ಲ. ಯದುವೀರ್ ಗೆ ನಾನು ಬಿಜೆಪಿ ಗೆ ಹೋಗಿ ನಿಲ್ಲು ಅಂತ ಹೇಳಿದ್ನ ಎಂದು ಪ್ರಶ್ನಿಸಿದರು. ಸಿಎಎ ಜಾರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಚುನಾವಣೆಗಾಗಿ ಜಾರಿ ಮಾಡಿದ್ದಾರೆ . ಇಷ್ಟು ದಿನ ಯಾಕೆ ಮಾಡಿರಲಿಲ್ಲ. ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ನಮ್ಮ ವಿರೋಧ ಇದೆ. ಕಾಂಗ್ರೆಸ್ ಸರ್ಕಾರ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಕೊಡುತ್ತಿದೆ ಎನ್ನುವ ಆರ್. ಅಶೋಕ್ ಹೇಳಿಕೆ ವಿಚಾರ. ಅದೆಲ್ಲ ಸುಳ್ಳು. ನೀರು ಬಿಡುವುದಕ್ಕೆ ನೀರು ಎಲ್ಲಿದೆ. ನಾವು ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಕೊಡಲ್ಲ. ಅವರು ಸಹ ನೀರು ಕೇಳಿಲ್ಲ. ತಮಿಳುನಾಡಿನವರೂ ಕೇಳಿದ್ರು ಕೊಡಲ್ಲ, ಕೇಂದ್ರದವರು ಹೇಳಿದ್ರು ಕೊಡಲ್ಲ. ಅಲ್ಲದೆ ನೀರು ಎಲ್ಲಿದೆ ಬಿಡುವುದಕ್ಕೆ , ಡ್ಯಾಂ ಖಾಲಿ ಇದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net