

ಚಾಮರಾಜನಗರ: ಜಿಲ್ಲೆಯು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ ಎಂದು ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಮತ್ತು ಕೆ.ವೆಂಕಟೇಶ್ ಅಧಿಕಾರಿಗಳನ್ನು ಹೊಗಳಿದರು. ಇದೇ ಸಂದರ್ಭದಲ್ಲಿ ವೇದಿಕೆ ಮುಂದೆ ಐದಾರು ಜನ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಹಿಡಿದುಕೊಂಡು ನಮಗೆ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದು ಹೇಳುತ್ತಿದ್ದರು. ಇವರನ್ನು ಪೊಲೀಸರು ಸಮಾಧಾನ ಪಡಿಸಿ ಕೂರಿಸಿದರು. ಸಮಾವೇಶದಲ್ಲಿ 35 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.