

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿಯಾಗಿ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರನ್ನು ಸರ್ಕಾರ ನಿಯೋಜಿಸಿ ಆದೇಶ ಹೊರಡಿಸಿದೆ.
ಅಪರ ಜಿಲ್ಲಾಧಿಕಾರಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದ ಕಾತ್ಯಾಯಿನಿ ದೇವಿ ಅವರನ್ನು ವರ್ಗಾಯಿಸಲಾಗಿದ್ದು, ಇವರ ಸ್ಥಾನಕ್ಕೆ ಕೊಳ್ಳೇಗಾಲ ಉಪವಿಭಾಗದ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರನ್ನು ತಕ್ಷಣ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಹೊಂದಿರುವ ಹುದ್ದೆಯೊಂದಿಗೆ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.