ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ಸರ್ಕಾರ ವಿಲ

12rajesh7
Published on

ಚಾಮರಾಜನಗರ: ರಾಜ್ಯದಲ್ಲಿರುವ ಬರಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಲವಾಗಿದೆ ಎಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎನ್‌ರಿಎಚ್ ಮಹದೇವಸ್ವಾಮಿ ಆರೋಪಿಸಿದರು.

ತಾಲೂಕಿನ ಸಂತೇಮರಹಳ್ಳಿಯಲ್ಲಿರುವ ಶಿವಕುಮಾರಸ್ವಾಮಿ ತೋಟದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸೋಮವಾರ ಆಯೋಜಿಸಿದ್ದ ರೈತರ ಪರಿಕ್ರಮ ಯಾತ್ರೆಯ ಸಮರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಬದಲು ತಮಿಳುನಾಡಿಗೆ ನೀರು ಬಿಡುವುದರಲ್ಲಿ ಕಾಲಹರಣ ಮಾಡಿ, ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಕೇಂದ್ರ ಸರ್ಕಾರ ನೆರವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ವಿಫಲವಾಗಿರುವ ರಾಜ್ಯ ಸರ್ಕಾರ ವಿಲವಾಗಿದೆ. ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಕ್ಕೂಟದ ವ್ಯವಸ್ಥೆಯ ಬಗ್ಗೆ ಗೌರವವಿಲ್ಲ ಎಂದು ದೂರಿದರು.

ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ, ಈ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡಲು ರೈತರು ಹಾಗೂ ರೈತ ಮಕ್ಕಳ ಜೇಬಿಗೆ ಕೈ ಹಾಕಿದೆ. ರೈತರಿಗೆ ಹೆಚ್ಚುವರಿ ತೆರಿಗೆಗಳ ಭಾರ. ಕೃಷಿ ಪರಿಕರಣಗಳು, ಬಿತ್ತನೆ ಬೀಜ, ಗೊಬ್ಬರ ಹಾಗೂ ರೈತರ ಜಮೀನುಗಳಿಗೆ ಖರೀದಿ ಹಾಗೂ ನೋಂದಾಣಿಗಳಿಗೆ ಹೆಚ್ಚುವರಿ ಶುಲ್ಕವನ್ನು ಹಾಕುತ್ತಿದೆ. ಅಲ್ಲದೇ ರೈತ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾನಿಧಿ ಕಾಲರ್‌ಶೀಪ್ ಅನ್ನು ನಿಲ್ಲಿಸಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ 6 ಸಾವಿರ ರೂ. ಜತೆಗೆ ರಾಜ್ಯ ಸರ್ಕಾರ ನೀಡುತ್ತಿದ್ದ 4 ಸಾವಿರ ರೂ.ಗಳನ್ನು ರದ್ದುಪಡಿಸಿ, ರೈತರಿಗೆ ನೀಡುತ್ತಿದ್ದ ಸಹಾಯಧನವನ್ನು ಈ ಸರ್ಕಾರ ರದ್ದು ಮಾಡಿದೆ ಎಂದರು.

ಹನೂರು ಮಂಡಲದ ರೈತ ಮೋರ್ಚಾ ಅಧ್ಯಕ್ಷ ಜಡೇಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ರೈತ ಮೋರ್ಚಾ ಮಂಡಲದ ಅಧ್ಯಕ್ಷ ಅಯ್ಯನಪುರ ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿ ಪುಣಜನೂರು ಚಂದ್ರಶೇಖರ್, ಕೊಳ್ಳೇಗಾಲ ಮಂಡಲದ ಅಧ್ಯಕ್ಷ ಕೆ.ಎನ್. ನಾಗೇಶ್, ನಗರ ಮಂಡಲದ ಅಧ್ಯಕ್ಷ ಕೆ.ಎಲ್. ಮಹದೇವಸ್ವಾಮಿ, ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಸ್.ಎಂ. ಲೋಕೇಶ್, ಎಪಿಎಂಸಿ ನಿರ್ದೇಶಕಿ ಕಲಾವತಿ, ರೈತ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಮ್ಮ ಆಲೂರು ಪುಷ್ಪಲತಾ, ಗೀತಾ, ಆಲೂರು ರವಿ, ಹೊಮ್ಮ ಬಾಬು, ಬೂದಂಬಳ್ಳಿ ಬಾಬು ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net