ಎಲ್ಲೇಮಾಳ ರಸ್ತೆ ಕಾಮಗಾರಿ ಪರಿಶೀಲನೆ

12 HANUR 3
Published on

ಹನೂರು: ಪಟ್ಟಣದಿಂದ ಎಲ್ಲೇಮಾಳ ಮಾರ್ಗದಲ್ಲಿ ಪ್ರಗತಿಯಲ್ಲಿರುವ ರಸ್ತೆ ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ ಮಂಗಳವಾರ ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಮಾತನಾಡಿ, ಈ ಮಾರ್ಗ ಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾಗಿದೆ. ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ ಕಾಮಗಾರಿ ಕೈಗೊಂಡು ಹಲವು ತಿಂಗಳು ಕಳೆದಿದ್ದು, ನಿಗದಿತ ಅವಧಿಯೊಳಗೆ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ಅಲ್ಲದೆ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ಕೇಳಿ ಬಂದಿದೆ. ಆದ್ದರಿಂದ ಭಕ್ತರು ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟವರಿಗೆ ಸೂಚಿಸಿದರು.

ಗ್ರಾಪಂ ಸದಸ್ಯ ಚಿನ್ನವೆಂಕಟ, ಮುಖಂಡರಾದ ಮಂಜೇಶ್, ವಿಜಯಕುಮಾರ್ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net