17ರಂದು ಅಭಿನಂದನಾ ಕಾರ್ಯಕ್ರಮ

C.S. Niranjanakumar
Published on

ಗುಂಡ್ಲುಪೇಟೆ: ಅಂಬೇಡ್ಕರ್ ಅನುಯಾಯಿಯಾಗಿರುವ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಅಭಿನಂದನಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಬೇಕು ಎಂದು ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಮನವಿ ಮಾಡಿದರು.

ಬಿಜೆಪಿಯಿಂದ ಮೈಸೂರಿನಲ್ಲಿ ಮಾ.17ರಂದು ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭಕ್ಕೆ ಹೆಚ್ಚಿನ ಅಭಿಮಾನಿಗಳು ಆಗಮಿಸಬೇಕು. ಸಿದ್ದರಾಮಯ್ಯ ಭೇಟಿ ನೀಡಿರುವುದು ಜಿಲ್ಲೆಗೆ ಕೊಡುಗೆ ನೀಡುವ ಬದಲು ರಾಜಕೀಯ ಪ್ರಚಾರಕ್ಕೆ ಸೀಮಿತಗೊಂಡಿದ್ದಾರೆ. ಯಾವುದೇ ಜಲಮೂಲಗಳಿಲ್ಲದ ಜಿಲ್ಲೆಯಲ್ಲಿ ಜನಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಬರದ ಬೇಗೆಯಿಂದ ರೈತರು ನಲುಗುತ್ತಿದ್ದಾರೆ. ಆದರೆ, ಇವರಿಗೆ ರೈತರ ಬಗ್ಗೆ ನಿಜವಾದ ಕಾಳಜಿಯಿದ್ದರೆ ಕೆರೆಗಳಿಗೆ ನೀರು ತುಂಬಿಸುತ್ತಿದ್ದರು. ಆದರೆ, ಅದು ಬಿಟ್ಟು ಹಳೆಯ ಭಾಗ್ಯಗಳ ಬಗ್ಗೆ ಬಿಟ್ಟಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಕ್ಷೇತ್ರದ ಜನತೆ ಶಾಸಕ ಗಣೇಶ್ ಪ್ರಸಾದ್ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕ್ಷೇತ್ರಕ್ಕೆ ಕೇವಲ 25 ಕೋಟಿ ರೂ. ಅನುದಾನ ನೀಡಿರುವುದು ಯಾವ ಮೂಲೆಗೂ ಸಾಲದಂತಾಗಿದೆ. ಆದ್ದರಿಂದ ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ತಂದು ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ಎಸ್.ಟಿ ಮೋರ್ಚಾ ಅಧ್ಯಕ್ಷ ಎನ್.ಮಲ್ಲೇಶ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಎಂ.ಮಲ್ಲಿಕಾರ್ಜುನ, ಮುಖಂಡ ಬಸವರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net