ದಲಿತರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಿ

Moodnaakodu Prakash
Published on

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಲಾನುಭವಿಗಳ ಸಮಾವೇಶದಲ್ಲಿ ಸಂವಿಧಾನ ಅಳಿವಿ-ಉಳಿವಿನ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನದ ಬಗ್ಗೆ ಅಷ್ಟೊಂದು ಗೌರವವಿದ್ದರೆ ದಲಿತರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೂಡ್ನಕೂಡು ಪ್ರಕಾಶ್ ಸವಾಲು ಹಾಕಿದರು.

ಈ ಹಿಂದೆ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗ್ಗಡೆ ಅವರು ಸಂವಿಧಾನ ಬದಲಾವಣೆಯ ಮಾತುಗಳನ್ನಾಡಿದ್ದಾಗ ಪಕ್ಷ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಂಡಿತ್ತು. ಸಂಸತ್ತಿನಲ್ಲಿ ಕ್ಷೆಮೆ ಕೇಳುವಂತೆ ಮಾಡಿತ್ತು. ಆದರೆ ಈ ಬಾರಿ ಅವರು ಸಂವಿಧಾನ ತಿದ್ದುಪಡಿಯ ಬಗ್ಗೆ ಮಾತನಾಡಿದ್ದಾರೆಯೇ ಹೊರತು, ಕಾಂಗ್ರೆಸ್‌ನವರು ಹೇಳುವಂತೆ ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವನ್ನು ಮುನ್ನೆಲೆಗೆ ತರುವ ಮೂಲಕ ದಲಿತರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ನಾಗರಾಜ್, ಶಿವಾನಂದಸ್ವಾಮಿ, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತಿಗೆಮೂರ್ತಿ, ಮುಕುಂದರಾಜ್, ಮಾಧ್ಯಮ ಸಹ ಸಂಚಾಲಕ ಅಶ್ವಿನ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net