ಕಾನೂನು ಪ್ರಕೋಷ್ಠ ಸಂಚಾಲಕರಾಗಿ ಹರವೆ ಮಂಜು ನೇಮಕ

HARAVE MANJU
Published on

ಚಾಮರಾಜನಗರ: ಜಿಲ್ಲಾ ಬಿಜೆಪಿ ಕಾನೂನು ಪ್ರಕೋಷ್ಠ ಸಂಚಾಲಕಾಗಿ ವಕೀಲ ಹರವೆ ಮಂಜು ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‌ಕುಮಾರ್ ಅದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಬಿಜೆಪಿಯನ್ನು ತಳಮಟ್ಟದಲ್ಲಿ ಸಂಘಟನೆ ಮಾಡುವ ತೆಗೆ ಮುಂಬರುವ ಎಲ್ಲಾ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸು ಹಾಗೂ ಸಂಘಟನೆಯನ್ನು ಬಲಗೊಳಿಸಲು ಶ್ರಮವಹಿಸಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net