

ಚಾಮರಾಜನಗರ: ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಭಾರತಮಾತೆಯ ಹೆಸರಿನಲ್ಲಿ ಅರ್ಚನೆ ಮಾಡಿ, ವಿಶೇಷಪೂಜೆ ಸಲ್ಲಿಸಿ ಭಾರತ್ ಮಾತಾಕಿ ಜೈ ಎನ್ನುವ ಮೂಲಕ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಶುಭಕೋರಲಾಯಿತು.
ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್.ಋಗ್ವೇದಿ ಮಾತನಾಡಿ, ದೇಶದ ಬಹುದೊಡ್ಡ ಸಂಶೋಧನಾ ಸಂಸ್ಥೆಯಾದ ಇಸ್ರೋ ಭಾರತವನ್ನು ಇಡೀ ಜಗತ್ತಿಗೆ ಪರಿಚಯಿಸಿದೆ. ಈ ದಿನ ದೇಶವನ್ನು ಅತ್ಯಂತ ಉನ್ನತಿಗೆ ಕೊಂಡೊಯ್ಯುವ ಮಹತ್ವವಾದ ದಿನವಾಗಿದೆ. ಚಂದ್ರಯಾನ-3 ಯಶಸ್ವಿಯಾಗಿ ಉಡಾವಣೆಯಾಗಿ ಕಕ್ಷೆ ಸೇರಲಿ ಎಂದು ಜಿಲ್ಲೆಯ ಜನತೆಯ ಪರವಾಗಿ ಪ್ರಾರ್ಥನೆಯನ್ನು ಸಲ್ಲಿಸಿದ್ದೇವೆ ಎಂದರು.
ಈ ವೇಳೆ ಓಂ ಶಾಂತಿ ಸಂಘಟನೆಯ ಬಿ.ಕೆ.ಆರಾಧ್ಯ ಹಾಗೂ ಇತರರು ಹಾಜರಿದ್ದರು.