ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ

14raju7
Published on

ಚಾಮರಾಜನಗರ: ಬಡ ಮಹಿಳೆಯರು ಸ್ವಾವಲಂಬನೆಯ ಬದುಕು ರೂಪಿಸಿಕೊಳ್ಳಲು ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ನಿಜಗುಣರಾಜು ಎಂಟು ವರ್ಷಗಳಿಂದ ಹೊಲಿಗೆ ಯಂತ್ರ ವಿತರಣೆ ಹಾಗೂ ಪರಿಸರ ಸಂರಕ್ಷಣೆ, ಸ್ವಚ್ಛ ಭಾರತ್‌ಗೆ ಪ್ರೋತ್ಸಾಹ ಸೇರಿದಂತೆ ಅನೇಕ ಜನಪರ ಕಾರ್ಯ ಮಾಡುತ್ತಿದ್ದಾರೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು.


ನಗರದ ಕರಿನಂಜನಪುರ ರಸ್ತೆಯಲ್ಲಿರುವ ಕಾಡಾ ಅಧ್ಯಕ್ಷರ ಖಾಸಗಿ ಜನ ಸಂಪರ್ಕ ಕಚೇರಿಗೆ ಶನಿವಾರ ಭೇಟಿ ನೀಡಿದ್ದ ಅವರು, ಮೂವರು ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಿ ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನಪರ ಕಾರ್ಯಕ್ರಮಗಳು ಕಟ್ಟ ಕಡೆಯ ವ್ಯಕ್ತಿಗೂ ತಲುಪುಬೇಕೇಂಬ ಉದ್ದೇಶ ನಮ್ಮಲ್ಲದಾಗಿದೆ. ಈ ನಿಟ್ಟಿನಲ್ಲಿ ಜಿ. ನಿಜಗುಣರಾಜು ಸೇವಾ ಕಾರ್ಯಗಳು ಪ್ರಶಂಸನೀಯ. ಪ್ರಧಾನಿ ಮೋದಿ ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರ ಉದ್ದೇಶವನ್ನು ಕ್ಷೇತ್ರದ ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಸ್ವಚ್ಛ ಭಾರತ್ ಯೋಜನೆ ಪ್ರೋತ್ಸಾಹಕ್ಕಾಗಿ ಶೌಚಗೃಹ ಬೇಸನ್‌ಗಳನ್ನು ಉಚಿತವಾಗಿ ನೀಡಿದ್ದಾರೆ ಎಂದರು.
ಬಡ ಕೂಲಿ ಕಾರ್ಮಿಕರಿಗೆ ವ್ಯಾಪಾರ ಮಾಡಲು ತಳ್ಳುವ ಗಾಡಿಗಳ ವಿತರಣೆ, ಅಂಗವಿಕಲರಿಗೆ ಸಲಕರಣೆ, ಪರಿಸರ ಸಂರಕ್ಷಣೆಗಾಗಿ ರೈತರಿಗೆ ಗಿಡಗಳ ವಿತರಣೆ, ಸೇವಾ ಸಿಂಧು ಸಂಚಾರ ವಾಹನಗಳ ಸೇವೆ, ಶುದ್ಧ ಕುಡಿಯುವ ನೀರು ಪೊರೈಕೆ ಸೇರಿದಂತೆ ಹತ್ತು ಹಲವಾರು ಯೋಜನೆಗಳು ಜನ ಸಾಮಾನ್ಯರಿಗೆ ತಲುಪಿದೆ ಎಂದು ಹೇಳಿದರು.


ಸೇವಾ ಮನೋಭಾವನೆಯೊಂದಿಗೆ ರಾಜಕೀಯ ಕ್ಷೇತ್ರಕ್ಕೆ ಬಂತು ಬಿಜೆಪಿಯಲ್ಲಿ ಸಕ್ರಿಯವಾಗಿ ದುಡಿಯುತ್ತಿರುವ ನಿಜಗುಣರಾಜು ಅವರ ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಆಶಿಸಿದರು.
ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಚಾಮುಲ್ ನಿರ್ದೇಶಕ ಶಿವಕುಮಾರ್, ಮುಖಂಡರಾದ ಕೂಡ್ಲೂರು ಹನುಮಂತಶೆಟ್ಟಿ, ಗ್ರಾಪಂ ಮಾಜಿ ಅಧ್ಯಕ್ಷ ಸೋಮಣ್ಣ, ಯುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೂರ್ಯ ಬಾಲರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net