

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಗತ ಕೋರಲು ನಗರಾದ್ಯಂತ ಅಳವಡಿಸಿರುವ ್ಲೆಕ್ಸೃ್ಗಳನ್ನು ತೆರವುಗೊಳಿಸುವಂತೆ ಬಹುಜನ ಸಮಾಜ ಪಾರ್ಟಿ ಹಾಗೂ ಸೋಸಿಯಲ್ ಡೆಮಾಕ್ರಟಿಕ್ ಪಾರ್ಟಿ ಆ್ ಇಂಡಿಯಾ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರಸಭೆ ಕಚೇರಿಯ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ನಗರಸಭೆ ಆಯುಕ್ತರು ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜೈ ಭುವನೇಶ್ವರಿ ವೃತ್ತದಿಂದ ಡಿವೈಎಸ್ಪಿ ಕಚೇರಿಯವರೆಗೂ ಯಾವುದೇ ರೀತಿಯ ಫ್ಲೆಕ್ಸೃ್ ಅಳವಡಿಸಬಾರದು ಎಂದು ನಗರಸಭೆ ಆಡಳಿತ ಮಂಡಳಿ ತೀರ್ಮಾನಿಸಿದೆ. ಈ ತೀರ್ಮಾನಕ್ಕೆ ವಿರುದ್ಧವಾಗಿ ಬಿಜೆಪಿಯವರು ಫ್ಲೆಕ್ಸೃ್ಗಳನ್ನು ಅಳವಡಿಸಿದ್ದಾರೆ. ಕೂಡಲೇ ಇವುಗಳನ್ನು ತೆರವುಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ್ದ ನಗರಸಭೆ ಆಯುಕ್ತ ಎಸ್.ವಿ. ರಾಮದಾಸ್ ಜಿಲ್ಲಾಧಿಕಾರಿ ಮೌಖಿಕ ಆದೇಶದ ಮೇರೆಗೆ ಫ್ಲೆಕ್ಸ್ ಅಳವಡಿಕೆಗೆ ಅವಕಾಶ ನೀಡಲಾಗಿದೆ. ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ಆಯುಕ್ತರು ಪ್ರತಿಯೊಬ್ಬರೂ ಶುಲ್ಕ ಪಾವತಿಸಿ ಫ್ಲೆಕ್ಸ್ ಅಳವಡಿಸಬಹುದು ಎಂದು ಆದೇಶ ಹೊರಡಿಸಿದ ಬಳಿಕ ಪ್ರತಿಭಟನೆ ಕೊನೆಗೊಂಡಿತ್ತು. ಪ್ರತಿಭಟನೆಯಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಸಂಯೋಜಕ ಎಸ್.ಪಿ. ಮಹೇಶ್, ಖಜಾಂಚಿ ರಾಜೇಂದ್ರ ಹೊಂಡರಬಾಳು, ವಾಸು ಹೊಂಡರಬಾಳು, ಬಾಬು ರಾಮಸಮುದ್ರ, ಮಹೇಂದ್ರ ಕಾಡಹಳ್ಳಿ, ಬಿವಿಎ್ ಜಿಲ್ಲಾಧ್ಯಕ್ಷ ಚಂದ್ರಕಾಂತ್, ಸಂಯೋಜಕ ರವಿಮೌರ್ಯ, ನಗರಸಭೆ ಸದಸ್ಯರಾದ ಅಬ್ರಾರ್ ಅಹ್ಮದ್, ಮಹೇಶ್ ಗಾಳೀಪುರ, ಅಪ್ಸರ್ ಪಾಷಾ, ಶಿವಕುಮಾರ್ ಸ್ವಾಮಿ ಇತರರು ಭಾಗವಹಿಸಿದ್ದರು.