

ಚಾಮರಾಜನಗರ:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದನದಲ್ಲಿ ‘ಕೆರೆಗೆ ನೀರು ತುಂಬಿಸುವುದು ವ್ಯರ್ಥ’ ಎಂಬ ಹೇಳಿಕೆ ನೀಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಹಳೆ ರೇಷ್ಮೆ ಮಾರುಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ವಾಹನಗಳನ್ನು ತಡೆದು ಸರ್ಕಾರ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ತಾಲೂಕು ಅಧ್ಯಕ್ಷ ಮಹೇಶ್, ಗುರು, ಚಿಕ್ಕಣ್ಣ, ಷಣ್ಮುಗಂ, ಮಣಿ, ನಟರಾಜು, ಆನಂದ್ ಹಾಗೂ ಇತರರು ಭಾಗವಹಿಸಿದ್ದರು.