ತ.ನಾಡಿಗೆ ನೀರು ಹರಿಸಲು ವಿರೋಧ

15chn3
Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಚಮಚ, ಸೌಟು ಪ್ರದರ್ಶಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಶ್ರೀ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಭಾನುವಾರ ಜಮಾಯಿಸಿದ ಪ್ರತಿಭಟನಾಕಾರರು ಚಮಚ, ಸೌಟು ಹಿಡಿದು ಮೆರವಣಿಗೆ ಹೊರಟು, ಶ್ರೀ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ಕೇಂದ್ರ ಸರ್ಕಾರ, ತಮಿಳುನಾಡು ಮತ್ತು ರಾಜ್ಯ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ 32 ದಿನಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಕೇಂದ್ರ, ರಾಜ್ಯ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿನ ಪರವಾಗಿ ಚಮಚಾಗಿರಿ ಮಾಡುತ್ತಿದೆ ಎನ್ನುವ ಸಂಕೇತವಾಗಿ ಸೌಟು ಮತ್ತು ಚಮಚ ಹಿಡಿದು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದೇವೆ ಎಂದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ಚಾ.ವೆಂ.ರಾಜ್‌ಗೋಪಾಲ್, ನಿಜಧ್ವನಿ ಗೋವಿಂದರಾಜು, ಗು.ಪುರುಷೋತ್ತಮ್, ನಾಗಣ್ಣ ದೊಡ್ಡರಾಯಪೇಟೆ, ಮಿಮಿಕ್ರಿ ಮಲ್ಲಣ್ಣ, ರಾಜಪ್ಪ, ಲಿಂಗರಾಜು, ನಂಜುಂಡಸ್ವಾಮಿ, ಸೋಮವಾರಪೇಟೆ ಮಂಜು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net