ಖಾಲಿ ಡ್ರಮ್ ಹಿಡಿದು ಪ್ರತಿಭಟನೆ

16chn2
Published on

ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಖಾಲಿ ಡ್ರಮ್ ಹಿಡಿದು ಸೋಮವಾರ ವಿನೂತನ ಪ್ರತಿಭಟನೆ ಮಾಡಲಾಯಿತು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಸೇರಿದ ಪ್ರತಿಭಟನಾಕಾರರು ಖಾಲಿ ಡ್ರಮ್ ಹಿಡಿದು ಮೆರವಣಿಗೆಯ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ರಸ್ತೆ ಸಂಚಾರ ತಡೆದು ಕೇಂದ್ರ, ತಮಿಳುನಾಡು, ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮ ಖಂಡಿಸಿ 33 ದಿನಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬರಿದಾಗುತ್ತಿದ್ದರೂ ಸರ್ಕಾರಗಳು ಮೌನವಹಿಸಿವೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ರಾಜಪ್ಪ, ತಾಂಡವಮೂರ್ತಿ, ಚಾ.ಸಿ.ಸಿದ್ದರಾಜು, ವೀರಭದ್ರ, ಸೋಮವಾರಪೇಟೆ ಮಂಜು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net