

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 112 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಮಂಗಳವಾರವೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ಮುಂದುವರಿಯಿತು.
ನಗರದ ಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಗುಂಪುಗೂಡಿದ ಪ್ರತಿಭಟನಾಕಾರರು, ಇಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ೋಷಣೆ ಕೂಗಿದರು.
ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 112 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಮಳೆ ಅಭಾವದಿಂದ ರಾಜ್ಯದಲ್ಲಿ ಜಲಾಶಯಗಳು ಬರಿದಾಗುತ್ತಿದ್ದು, ಬೆಳೆಗಳು ಸಂಪೂರ್ಣ ಒಣಗುತ್ತಿವೆ. ಮುಂದಿನ ದಿನಗಳಲ್ಲಿ ತೀವ್ರ ಬರಗಾಲ ಬರಲಿದೆ. ಹೀಗಾಗಿ ಕರ್ನಾಟಕ ಸರ್ಕಾರ ಎಚ್ಚೆತ್ತುಗೊಂಡು ತಮಿಳುನಾಡಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು. ರಾಜ್ಯದ ಜನತೆಗೆ ನೀರು ಉಳಿಸಬೇಕು. ಪ್ರತಿಭಟನೆಯಲ್ಲಿ ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಚಾ.ಹ.ಕುಮಾರ್, ರಾಚಪ್ಪ, ಪ್ರಕಾಶ್, ಮಂಜು, ತಾಂಡವಮೂರ್ತಿ ಇತರರು ಭಾಗವಹಿಸಿದ್ದರು.