ಆರ್. ಧ್ರುವನಾರಾಯಣ ಸೇವೆ ಅನನ್ಯ

21raju2
Published on

ಚಾಮರಾಜನಗರ: ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವನಾರಾಯಣ ಮತ್ತು ಪತ್ನಿ ವೀಣಾ ಸಮಾಧಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಪುಷ್ಪ ನಮನ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಅವರು, ಧ್ರುವನಾರಾಯಣ ಕ್ರಿಯಾಶೀಲ ರಾಜಕಾರಣಿಗಳಲ್ಲಿ ಒಬ್ಬರು. ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ಕ್ಷೇತ್ರವಾರು ಬಳಕೆ ಮಾಡುವುದರಲ್ಲಿ ಮೊದಲನೇ ಸ್ಥಾನಕ್ಕೆ ಭಾಜನರಾಗಿದ್ದರು. ಅಲ್ಲದೇ ರಾಜ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ನಂತರ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ್ದರು. ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಪಡೆದು, ಬಹುಮತ ಹೊಂದುವ ಮೂಲಕ ಅಧಿಕಾರಕ್ಕೆ ಬಂದಿದೆ. ಇಂದು ಅವರು ಬದುಕಿದ್ದರೆ ಹೆಚ್ಚು ಸಂತಸ ಪಡುತ್ತಿದ್ದರು. ಅಷ್ಟರಲ್ಲಿ ನಮ್ಮನ್ನೆಲ್ಲ ಅಗಲಿದ್ದು, ವಿಷಾಧನೀಯ ಎಂದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಮಾಧ್ಯಮ ಕಾರ್ಯದರ್ಶಿ ಅರುಣ್‌ಕುಮಾರ್, ನಾಗವಳ್ಳಿ ನಾಗಯ್ಯ, ಬಿ.ಎಸ್.ರೇವಣ್ಣ, ಕೆಂಪರಾಜು, ನಾಗರಾಜು, ಚಿನ್ನಸ್ವಾಮಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net