

ಚಾಮರಾಜನಗರ: ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ ಎಂದು ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಮನವಿ ಮಾಡಿದರು.
ತಾಲೂಕಿನಲ್ಲಿ ಯಣಗುಂಬ, ಅಚ್ಚಟಿಪುರ, ನಿಜಲಿಂಗಪುರ, ಯಾನಗಹಳ್ಳಿಯಲ್ಲಿ ಪಾದಯಾತ್ರೆ ನಡೆಸಿ ಮನೆ-ಮನೆಗೆ ತೆರಳಿ ಮತಯಾಚಿಸಿದರು. ನನ್ನ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಕಲ್ಪಿಸಿದ್ದೇನೆ. ನಾನು ಮಾಡಿದ ಅಭಿವೃದ್ಧಿ ಕೆಲಸಗಳು ಮತದಾರರಿಗೆ ತಿಳಿದಿದ್ದು, ಮತ್ತೊಮ್ಮೆ ತಮ್ಮ ಸೇವೆ ಮಾಡಲು ನನಗೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಜಿಲ್ಲಾ ಪರಿಶಿಷ್ಟ ಪಂಗಡದ ವಿಭಾಗದ ಜಿಲ್ಲಾಧ್ಯಕ್ಷ ಎಂ.ಮಹದೇವನಾಯಕ್, ಮಾಜಿ ಸದಸ್ಯ ಅರಕಲವಾಡಿ ಸೋಮನಾಯಕ್, ರಮೇಶ್, ರಾಜೇಂದ್ರ, ನಿಜಲಿಂಗನಪುರ ಮಲ್ಲಿಕ್, ನಾರಾಯಣನಾಯಕ್, ಶಂಬಪ್ಪ, ಶೇಖರಪ್ಪ, ಗಿರಿಯಪ್ಪ, ರಮೇಶ್, ಸಂಪತ್ ಇತರರು ಇದ್ದರು.