ಸಾಲ ತೀರಿಸಿ, ಮತ್ತೆ ಸಾಲ ಪಡೆಯಿರಿ

23chn2
Published on

ಚಾಮರಾಜನಗರ: ಸಕಾಲದಲ್ಲಿ ಸಾಲ ಮರು ಪಾವತಿ ಮಾಡುವುದು ನಿರ್ಣಾಯಕ. ಸಾಲ ಮರು ಪಾವತಿ ಮಾಡಿದರೆ ಮತ್ತೆ ಸಾಲ ಪಡೆಯಲು ಸಾಧ್ಯ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ಸೇರ್ಪಡೆ ಮತ್ತು ಅಭಿವೃದ್ಧಿ ವಿಭಾಗದ ಮಹಾಪ್ರಬಂಧಕಿ ಸುನಂದಾ ಹೇಳಿದರು.

ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ಸ್ವಸಹಾಯ ಸಂಘಗಳಿಗಾಗಿ ಗುರುವಾರ ಆಯೋಜಿಸಿದ್ದ ಕ್ಷೇತ್ರ ಮಟ್ಟದ ಹಣಕಾಸು ಸುರಕ್ಷತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದುರ್ಬಲರ ಉನ್ನತಿ ಮೂಲಕ ಎಲ್ಲರ ಅಭಿವೃದ್ಧಿ ಎಂಬ ಗಾಂಧಿ ತತ್ವವೇ ನಮ್ಮ ಧ್ಯೇಯ. ಹಣಕಾಸು ಸಾಕ್ಷರತೆ ಹಣಕಾಸು ಯೋಗಕ್ಷೇಮಕ್ಕೆ ಕಾರಣ. ಮಹಿಳೆಯರು ಸ್ವತ್ತನ್ನು ಹೊಂದಲು ಸಹಾಯ ಮಾಡುತ್ತದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ವಿವಿಧ ಉದ್ಯಮಗಳನ್ನು ಸ್ಥಾಪಿಸಿ ಆರ್ಥಿಕವಾಗಿ ಸ್ವಾವಲಂಬಿಯಾಗಲು ಸಾಧ್ಯವಾಗುತ್ತಿದೆ. ಜಿಲ್ಲೆಯಲ್ಲಿ ಆರ್ಥಿಕ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ ಎಂದರು. ಕಾರ್ಯಕ್ರಮದಲ್ಲಿ ಬ್ಯಾಂಕ್ ಅಧಿಕಾರಿ ರಾಜೇಶ್‌ಕುಮಾರ್ ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net