

ಚಾಮರಾಜನಗರ: ಶುಕ್ರವಾರ ಬೆಳ್ಳಂಬೆಳಗ್ಗೆ ಚಾಮರಾಜನಗರದ ಸುವರ್ಣವತಿ ಡ್ಯಾಂ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಪೂಜೆ ಸಲ್ಲಿಸಲು ತಿರುಪ್ಪುರ್ನಿಂದ ಹೊರಟವರ ಟೆಂಪೋ ಟ್ರಾವೆಲರ್ ವಾಹನ ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಪರಿಣಾಮ ಒಂದೇ ಕುಟುಂಬದರ ಮೂವರು ಮೃತಪಟ್ಟಿದ್ದು,14 ಮಂದಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ತಾಲೂಕಿನ ಸುವರ್ಣವತಿ ಜಲಾಶಯದ ಬಳಿಯಿರುವ ಗುಂಡಿಬೋರೆ ಬಳಿ ಶುಕ್ರವಾರ ಮುಂಜಾನೆ 4 ಗಂಟೆ ಅವಗಢ ನಡೆದಿದೆ. ಮೃತರನ್ನು ತಿರುಪ್ಪುರ್ ನ ಸುಬ್ರಮಣ್ಯ(75), ಅಮರಾವತಿ(65) ಪುತ್ರಿ ಕೋಕಿಲ(40) ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಚಾಮರಾಜನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್)