

ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ಪ್ರತಿ ತಿಂಗಳ ಮೊದಲನೆಯ ಭಾನುವಾರ ಹಮ್ಮಿಕೊಳ್ಳುವ ಕಣ್ಣಿನ ಉಚಿತ ತಪಾಸಣಾ ಶಿಬಿರ ಭಾನುವಾರ ನಡೆಯಿತು.
ಶಿಬಿರದಲ್ಲಿ ಒಟ್ಟು 455 ಜನ ತಪಾಸಣೆ ಮಾಡಿಸಿಕೊಂಡರು. ಇದರಲ್ಲಿ 95 ಜನರು ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದರು. ಅವರನ್ನು ಮಂಗಳವಾರ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.
ಇದೇ ವೇಳೆ ರೋಟರಿ ಅಧ್ಯಕ್ಷ ಕೆ.ಎಂ.ಮಹದೇವಸ್ವಾಮಿ ಮಾತನಾಡಿ, ಕಣ್ಣಿನ ದೃಷ್ಠಿ ಎಲ್ಲರಿಗೂ ಮಹತ್ವದ್ದು, ಅದರಲ್ಲೂ ವಿಶೇಷವಾಗಿ ವೃದ್ದರಿಗೆ ಕಣ್ಣಿನ ಸಮಸ್ಯೆ ಕಾಡುತ್ತದೆ. ದಿನನಿತ್ಯ ಜೀವನದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅವರಿಗೆ ಅನುಕೂಲ ಕಲ್ಪಿಸಲು ರೋಟರಿ ಸಂಸ್ಥೆಯು ಪ್ರತಿ ತಿಂಗಳ ಮೊದಲ ಭಾನುವಾರ ಉಚಿತ ನೇತ್ರಾ ತಪಾಸಣಾ ಅಯೋಜಿಸಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು. ರೋಟರಿ ಸಂಸ್ಥೆಯ ಸದಸ್ಯ ರಾಜು ವರ್ಗೀಸ್, ಮಾಜಿ ಅಧ್ಯಕ್ಷ ಕಮಲ್ರಾಜ್, ಎಸ್‌ಆರ್‌ಎಸ್ ಶ್ರೀನಿವಾಸ್, ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್‌ನ ರಾಮು ಇತರರು ಹಾಜರಿದ್ದರು.