ಸಿದ್ದರಾಮಯ್ಯ ಸಿಎಂ ಆಯ್ಕೆ ಹಿನ್ನೆಲೆ ಸಂಭ್ರಮಾಚರಣೆ

18raju4
Published on

ಚಾಮರಾಜನಗರ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶ್ರೀ ಸಂಗೊಳ್ಳಿರಾಯಣ್ಣ ಯುವ ವೇದಿಕೆ ಹಾಗು ಸಿದ್ದರಾಮಯ್ಯ ಅಭಿಮಾನಿಗಳು ನಗರದಲ್ಲಿ ಗುರುವಾರ ಸಂಜೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಿಸಿದರು.

ನಗರದ ಶ್ರೀಭುವನೇಶ್ವರಿ ವೃತ್ತದಲ್ಲಿ ರಾಜ್ಯ ಸಂಗೊಳ್ಳಿ ರಾಯಣ್ಣ ಯುವ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಎಸ್. ರಾಜಶೇಖರ್ ನೇತೃತ್ವದಲ್ಲಿ ಜಮಾಯಿಸಿದ ಸಿದ್ದರಾಮಯ್ಯನವರ ನೂರಾರು ಅಭಿಮಾನಿಗಳು ಹಾಗೂ ವೇದಿಕೆಯ ಪದಾಧಿಕಾರಿಗಳು ಸಿದ್ದು ಪರ ಜೈಕಾರ ಕೂಗಿದರು. ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ವಿಜಯೋತ್ಸವ ಅಚರಣೆ ಮಾಡಿದರು.
ಈ ಸಂದರ್ಭದಲ್ಲಿ ಎಸ್.ರಾಜಶೇಖರ್ ಮಾತನಾಡಿ, ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ರಾಜ್ಯ ಅಭಿವೃದ್ದಿಗೆ ಪೂರಕವಾಗಿದೆ. ಅವರು ಕೇವಲ ಒಂದು ಜಾತಿಯ ವ್ಯಕ್ತಿಯಲ್ಲ, ಒಂದು ಶಕ್ತಿ ಎಂದರು.

ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಸಹ ನಮ್ಮ ನಾಯಕರು. ಇಬ್ಬರೂ ಜೋಡೆತ್ತುಗಳಂತೆ ಸರ್ಕಾರನ್ನು ಮುನ್ನಡೆಸಿ ಕಾಂಗ್ರೆಸ್ ಕೊಟ್ಟಿರುವ 5 ಪ್ರಮುಖ ಗ್ಯಾರಂಟಿ ಭರವಸೆಗಳನ್ನು ಈಡೇರಿಸುತ್ತಾರ ಎಂದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಿ, ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಲು ಎಂದು ಅವರು ಆಶಿಸಿದರು.

ವಕೀಲರಾದ ಶಿವರಾಂ, ಗುತ್ತಿಗೆದಾರ ಸುಬ್ಬೇಗೌಡ, ಮಹದೇವ, ನಗರಸಭಾ ಮಾಜಿ ಸದಸ್ಯ ಗೋವಿಂದರಾಜು, ಮುಖಂಡರಾದ ಮಹೇಶ್‌ಗೌಡ, ನಂಜುಂಡೇಗೌಡ, ಆನಂದ್, ಕರಿನಂಜನಪುರಸ್ವಾಮಿ, ಕೋಡಿಮೋಳೆ ಗೋವಿಂದಶೆಟ್ಟಿ, ಕಾಗಲವಾಡಿ ಶಿವಸ್ವಾಮಿ, ಚಿನ್ನಸ್ವಾಮಿ, ಚಿಕ್ಕಮಾದೇಗೌಡ, ರಾಜೇಶ್, ಉಮೇಶ್, ಶ್ರೀನಿವಾಸ್ ಕಾಗಲವಾಡಿಮೋಳೆ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net