

ಚಾಮರಾಜನಗರ: ಅಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳ ನಡುವಿನ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳ ವಿನಿಮಯದ ಒಡಂಬಡಿಕೆಗೆ ಚಾಮರಾಜಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಸಹಿ ಹಾಕಿದ್ದಾರೆ.
ಭುವನೇಶ್ವರದ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಆ.9ರಿಂದ 14ರವರೆಗೆ ಆಯೋಜಿಸಿರುವ ವಿಶ್ವ ಮಾನವಶಾಸ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ. ಈ ಕುರಿತು ವಿಜಯವಾಣಿಯೊಂದಿಗೆ ಮಾತನಾಡಿದ ಅವರು, ಒಡಂಬಡಿಕೆಗೆ ಸಹಿ ಹಾಕಿರುವುದರಿಂದ ಚಾಮರಾಜನಗರ ವಿಶ್ವವಿದ್ಯಾಲಯದ ಅಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ಸಿಗಲಿದೆ. ಅಲ್ಲದೆ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ನಮ್ಮ ವಿಶ್ವವಿದ್ಯಾಲಯದ ಜತೆಗೆ ಇಂತಹ ಒಡಂಬಡಿಕೆ ಮಾಡಿಕೊಳ್ಳಲು ಆಸಕ್ತಿ ಹೊಂದಿದ್ದು, ಪ್ರಕ್ರಿಯೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.