ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಸಿದ್ಧತೆ ನಡೆಸಿ

22 yelandur 01
Published on

ಯಳಂದೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಲೂಕು ಆಡಳಿತ ವತಿಯಿಂದ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಎನ್.ಮಹೇಶ್ ಅಕಾರಿಗಳಿಗೆ ಸೂಚಿಸಿದರು.


ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯೋತ್ಸವ ಪ್ರಯುಕ್ತ ಪಟ್ಟಣಾದ್ಯಂತ ಹಬ್ಬದ ವಾತಾವರಣ ಸೃಷ್ಟಿಸಬೇಕು. ಇದಕ್ಕಾಗಿ ಎಲ್ಲ ಅಂಗಡಿಗಳ ಮುಂಭಾಗದಲ್ಲೂ ಕನ್ನಡ ಬಾವುಟಗಳನ್ನು ಕಟ್ಟುವಂತೆ ವರ್ತಕರಿಗೆ ಮನವೊಲಿಸಬೇಕು. ಕನ್ನಡ ನಾಮಲಕ ಕಡ್ಡಾಯವಾಗಿ ಹಾಕುವಂತೆ ಸೂಚನೆ ನೀಡಬೇಕು. ಇಡೀ ಪಟ್ಟಣವನ್ನು ತಳಿರು ತೋರಣಗಳಿಂದ ಸಿಂಗರಿಸಬೇಕು. ಶಾಲಾ ಮಕ್ಕಳು ಸೇರಿದಂತೆ ಎಲ್ಲ ಇಲಾಖೆಗಳ ನೌಕರರು, ಕನ್ನಡಪರ ಸಂಘಟನೆಗಳ ಸದಸ್ಯರು, ಆಟೋ, ಟ್ಯಾಕ್ಸಿ ಚಾಲಕರು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಸಿದ್ಧತೆ ಮಾಡಿಕೊಳ್ಳಬೇಕು. ವೇದಿಕೆ ಕಾರ್ಯಕ್ರಮವನ್ನು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಸಬೇಕು. ಒಂದು ವೇಳೆ ಮಳೆಯಿಂದ ತೊಂದರೆಯಾದರೆ ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಕಾರ್ಯಕ್ರಮ ನಡೆಸಲು ಸಿದ್ಧವಾಗಬೇಕು ಎಂದು ಸಲಹೆ ನೀಡಿದರು.


ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಪ್ರಭಾವತಿ, ಸದಸ್ಯರಾದ ಸವಿತಾ, ಸುಶೀಲಾ, ನಾಮನಿರ್ದೇಶಿತ ಸದಸ್ಯರಾದ ರಘು, ಮಹೇಶ್, ತಹಸೀಲ್ದಾರ್ ಆನಂದಪ್ಪ ನಾಯಕ್, ಮುಖ್ಯಾಕಾರಿ ಮಲ್ಲೇಶ್, ಕೆ.ಕಾಂತರಾಜು, ಪಶು ಸಂಗೋಪನಾ ಇಲಾಖೆಯ ಡಾ.ಸುಗಂಧರಾಜನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net