

ಯಳಂದೂರು : ತಾಲೂಕಿನ ಕಿನಕಹಳ್ಳಿ ಗ್ರಾಮದ ಅಂಗವಿಕಲ ವಿದ್ಯಾರ್ಥಿ ವೆಂಕಟೇಶ್ ಗುಂಡು ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಕೆಸ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈತ, ಶೇ.80ರಷ್ಟು ದೃಷ್ಟಿ ನ್ಯೂನತೆ ಹೊಂದಿದ್ದಾನೆ. ಆದರೂ ಕ್ರೀಡಾ ಚಟುವಟಿಕೆಯಲ್ಲಿ ಸದಾ ಮುಂದಿದ್ದು, ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ತಂದೆ-ತಾಯಿ ಇಬ್ಬರೂ ಇಲ್ಲದ ಈತ, ಅಜ್ಜಿಯ ಆರೈಕೆಯಲ್ಲಿ ಬೆಳೆಯುತ್ತಿದ್ದಾನೆ. ಈತನ ಸಾಧನೆ ಮೆಚ್ಚಿ ಗ್ರಾಮದ ಬಿಜೆಪಿ ಮುಖಂಡ ಕಿನಕಹಳ್ಳಿ ರಾಚಯ್ಯ 5 ಸಾವಿರ ರೂ. ನಗದು ಬಹುಮಾನ ನೀಡಿ ಗ್ರಾಮಸ್ಥರ ಸಮ್ಮುಖದಲ್ಲಿ ಸನ್ಮಾನಿಸಿದ್ದಾರೆ.